ವಿಜಯವಾಣಿ ಸುದ್ದಿಜಾಲ ಗದಗ
ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಗೆಲ್ಲುವುದಕ್ಕಾಗಿಯೇ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಈ ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಎಸ್ಸಿಪಿ ಮತ್ತು ಟಿಎಸ್ಪಿ ವಿಶೇಷ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅನುದಾನದ ದುರ್ಬಳಕೆಯನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಸ್ಲಂ ಜನಾಲೋಂದನ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಗುರುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಅನ್ನ ಭಾಗ್ಯ ಯೋಜನೆಗೆ ಪರಿಶಿಷ್ಟ ಜಾತಿ, ಪಂಗಡಗಳ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಅನರ್ಹರಿಗೆ ಗೃಹಲಕ್ಷಿ$್ಮ ಯೋಜನೆಯ ಲಾಭ ಸಿಗುತ್ತಿದೆ. ಅನುದಾನ ದುರ್ಬಳಕೆ ಆಗಿದ್ದರಿಂದ ಅಕ್ರಮ ಎಸಗಿದವರನ್ನು ಕಾನೂನಿನ ಅಡಿಯಲ್ಲಿ ಶಿೆಗೆ ಗುರಿಪಡಿಸಿಬೇಕು ಎಂದು ಸದಸ್ಯರು ಆಗ್ರಹಿಸಿದರು.
ಅಶೋಕ ಕುಸಬಿ, ರವಿಕುಮಾರ ಬೆಳಮಕರ, ಇಬ್ರಾಹಿಂ ಮುಲ್ಲಾ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಢಾಲಾಯತ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ ಇತರರು ಇದ್ದರು.