ಗದಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅನುಷ್ಟಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕೆಂದು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ವಿವಿಧ ಇಲಾಖೆಯವರು ಎಸ್.ಸಿ.ಪಿ./ ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಹಾಗೂ ಖರ್ಚಾದ ಅನುದಾನದ ವಿವರ, ಫಲಾನುಭವಿಗಳ ಆಯ್ಕೆ ಹಾಗೂ ಅಗತ್ಯವಿರುವ ಅನುದಾನದ ವಿವರವನ್ನು ಕೇಂದ್ರ ಕಚೇರಿಗೆ ಕಳುಹಿಸುವಾಗ ಅದರ ಒಂದು ಪ್ರತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದರು.
ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬAಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದಲ್ಲಿ ಕ್ರಿಮಿನಲ್ ಪ್ರಕರಣವೆಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.ವಿನಾಕಾರಣ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು. ಹಾಗೂ ಸ್ವೀಕರಿಸಿದ ಅರ್ಜಿಗಳಿಗೆ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಸಮರ್ಪಕ ಕೆಲಸ ನಿರ್ವಹಣೆಯಾಗದಿದ್ದರೆ ಸಂಬAಧಿಸಿದ ಅಧಿಕಾರಿಗಳಿಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ ಪೋತದಾರ ಅವರು ಮಾತನಾಡಿ ಎಸ್.ಸಿ.ಎಸ್‌ಪಿ ಉಪಹಂಚಿಕೆ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆ ಸೇರಿದಂತೆ ಜನೆವರಿ 2025 ರವರೆಗೆ ಒಟ್ಟಾರೆ 83.01 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 71.72 ಕೋಟಿ ರೂ.ಖರ್ಚಾಗಿದೆ. 40031 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಅದೇ ರೀತಿಯಾಗಿ ಟಿ.ಎಸ್.ಪಿ.ಯೋಜನೆಯಡಿ ವಿವಿಧ ಇಲಾಖೆ ಸೇರಿದಂತೆ ಜನೆವರಿ 2025 ರವರೆಗೆ 18.71 ಕೋಟಿ ರೂ.ಬಿಡುಗಡೆಯಾಗಿದ್ದು ಆ ಪೈಕಿ 15.68 ಕೋಟಿ ರೂ. ಖರ್ಚಾಗಿದೆ. 17326 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದಾರೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಉಪವಿಬಾಗಾಧಿಕಾರಿ ಗಂಗಪ್ಪ ಎಂ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.