ಗದಗ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ 2025ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಅಭ್ಯಥಿರ್ಗಳು ಸೇವಾ ಸಿಮಧು ಜಾಲತಾಣ ಮೂಲಕ ಅಜಿರ್ ಸಲ್ಲಿಸಬಹುದು ಎಂದು ತಾಲೂಕ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024-25ನೇ ಶೈಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಸ್ನಾತಕೋತ್ತರ ಪದವಿ, ಪದವಿ ಹಾಗೂ ಡಿಪ್ಲೋಮಾ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾಥಿರ್ಗಳು ಕಳೆದ 6 ತಿಂಗಳುಗಳ ಕಾಲ ಉದ್ಯೋಗ ಹೊಂದಿಲ್ಲದವರು ಹಾಗೂ ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇದ್ದವರು ಮತ್ತು ಕನಿಷ್ಠ 6 ವರ್ಷಗಳ ಕಾಲ ಕರ್ನಾಟಕದ ರಹವಾಸಿ ಆಗಿರುವವರು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆಯಬಹುದಾಗಿದೆ. ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ, ಹಾಗೂ ಡಿಪ್ಲೋಮಾ ಉತ್ತೀರ್ಣರಾದವರಿಗೆ 1,500 ರೂ. ನಿರುದ್ಯೋಗಿ ಭತ್ಯೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.