ಜಿಲ್ಲೆ

ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಮಾಲಿಕೆಯಲ್ಲಿ ಕಾಶೀ ಶ್ರೀಗಳ ಅಭಿಮತ

ವಿಜಯವಾಣಿ ಸುದ್ದಿಜಾಲ ಗದಗ

ಸಮಸ್ತ ಮನುಕುಲಕ್ಕೆ ಉಪದೇಶ ಮಾಡುವ ಗ್ರಂಥ ಸಿದ್ಧಾಂತ ಶಿಖಾಮಣಿ ಆಗಿದೆ. ಈ ಪವಿತ್ರ ಗ್ರಂಥವನ್ನು ವೀರಶೈವ ಧರ್ಮಗ್ರಂಥ ಎಂದು ಬಣ್ಣಿಸಲಾಗಿದ್ದರೂ ಅದು ವೀರಶೈವರಿಗೆ ಅಷ್ಟೇ ಸೀಮಿತವಾಗಿಲ್ಲ. ಜಗತ್ತಿನ ಎಲ್ಲ ಧಮಿರ್ಯರೂ ಅಧ್ಯಯನ ಮಾಡುವುದರಿಂದ ಇದನ್ನು ಜಾಗತಿಕ ಧರ್ಮಗ್ರಂಥ ಎನ್ನಲಾಗಿದೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಶ್ರೀಮದ್​ ಕಾಶೀ ಜ್ಞಾನಸಿಂಹಾಸನಾಧೀಶ್ವರ ಜ. ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.

ರವಿವಾರ ನಗರದ ಗಾಣಿಗ ಭವನದಲ್ಲಿ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಎಲ್ಲ ಸಿದ್ಧಾಂತಗಳಿಗಿಂತ ಈ ಗ್ರಂಥ ಮೇಲಿನ ಸ್ತರದಲ್ಲಿ ಇರುವುದರಿಂದ ವೀರಶೈವ ಧರ್ಮದ ಪ್ರಮುಖ ಗ್ರಂಥವೆಂದು ಬಣ್ಣಿಸಲಾಗಿದೆ. ಈ ಗ್ರಂಥವನ್ನು ಎಲ್ಲರೂ ಓದಬೇಕು. ತಿಳಿಯಬೇಕು. ಹಾಗೆಯೇ ಅದರಂತೆ ಧರ್ಮದ ಹಾದಿಯಲ್ಲಿ ಮುನ್ನಡೆದು ತಮ್ಮ ಜೀವನವನ್ನು ಪಾವನ ಮಾಡಿಕೊಳ್ಳಬೇಕು ಎಂದರು.

ಗುಳೇದಗುಡ್ಡದ ಒಪ್ಪತ್ತೇಶ್ವರ ಮಠದ ಒಪ್ಪತ್ತೇಶ್ವರ ಮಹಾಸ್ವಾಮಿಗಳು ಮಾತನಾಡಿ ಎಲ್ಲರೂ ಧರ್ಮದ ಸನ್ಮಾರ್ಗದಲ್ಲಿ ಮುನ್ನಡೆಯಬೇಕು. ಭಾರತೀಯ ಸಂಸತಿ, ಸಂಸ್ಕಾರವನ್ನು ಪಾಲಿಸುವ ಮೂಲಕ ಮಕ್ಕಳಿಗೂ ಇವುಗಳನ್ನು ರೂಢೀಸಬೇಕು. ಈ ಶರೀರಕ್ಕೆ ಸದ್ಗುಣಗಳ ಸಂಸ್ಕಾರ ನೀಡಿದಲ್ಲಿ ಮೋ ಪ್ರಾಪ್ತಿಯಾಗಲು ಸಾಧ್ಯ ಎಂದರು.

ನೇತೃತ್ವ ವಹಿಸಿದ್ದ ಯಲಬುರ್ಗಾದ ಧರಮುರಡಿ ಹಿರೇಮಠದ ಬಸವಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು. ನರೇಗಲ್​ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಸಿದ್ದಾಂತ ಸಿಖಾಮಣಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಂಡರಪುರದ ಸುಭಾಸ ಸಿದ್ಧರಾಮ ಮಮಾನೆ ಅವರಿಗೆ ಧರ್ಮಪ್ರಕಾಶ ಪ್ರಶಸ್ತಿಯನ್ನು ಹಾಗೂ ಉಡನಕಲ್​ನ ಸರ್ಕಾರಿ ಪ್ರೌಢ ಶಾಲೆಯ ಸಂಗೀತ ಶಿಕ ವೀರಭದ್ರಪ್ಪ ಹಿರೇಬೆನಕಲ್​ ಅವರಿಗೆ ದಿವ್ಯಾಂಗ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪಂಚಾರಯ್ಯ ಹಿರೇಮಠ, ಲಿಂಗರಾಜ ಶಿಗ್ಲಿಮಠ, ಎಸ್​.ಎಸ್​.ಮೇಟಿ, ಮರಿಸ್ವಾಮಿ ಹಿರೇಮಠ, ಅನ್ನರ್ಪೂಣ ಗಡಾದ, ಶಾಂತಾ ಹಿರೇಮಠ, ಶಾಂತೇಶ ಅರಮನಿ ದಂಪತಿಗಳನ್ನು ಪೂಜ್ಯರು ಆಶೀರ್ವದಿಸಿದರು ವಿ. ಸಿ.ಧನ್ನೂರಹಿರೇಮಠ, ಕೆ. ವಿ. ಪಾಟೀಲ, ಉಮೇಶ ಭೂಸ್ತ, ಗುರುಸಿದ್ಧಯ್ಯ ಹಿರೇಮಠ, ವಿ. ಕೆ. ಗುರುಮಠ ಇತರರು ಇದ್ದರು.