AA 
ಜಿಲ್ಲೆ

ಗದಗ: ಸೊರಟೂರಿನ ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡದ ಭೂಮಿ ಪೂಜೆ

Gadag - Shivanand Hiremath

ಗದಗ: ಸೊರಟೂರ ಗ್ರಾಮದಲ್ಲಿ ಬುಧವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಶಾಲಾ ಶಿಕ್ಷಣ ಇಲಾಖೆ,ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ 2023-24 ಸಾಲಿನ 8443 ಲೆಕ್ಕ ಶೀರ್ಷಿಕೆಯಡಿ ಅಂದಾಜು ರೂ1.69 ಕೋಟಿ ಅನುದಾನದಲ್ಲಿ ನಿರ್ಮಿಸುವ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡದ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಎಸ್.ಪಾಟೀಲ್, ಗಣ್ಯರಾದ ವಾಸಣ್ಣ ಕುರಡಗಿ, ಟಿ ಈಶ್ವರ್, ಸಿದ್ದು ಪಾಟೀಲ್, ಸೊರಟೂರ ಗ್ರಾ.ಪಂ ಅಧ್ಯಕ್ಷತೆ ಚಂದ್ರಮ್ಮ ಓಂಕಾರಿ,ಎಸ್ ಡಿ ಎಮ್ ಸಿ ಗೌರವ ಅಧ್ಯಕ್ಷತೆ ನೀಲಮ್ಮ ಮಾದಣ್ಣನವರ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್ .ಬಾರಟಕಿ ಪ್ರಾಚಾರ್ಯರಾದ ಎಸ್ ಎ ಅವಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸೊರಟೂರಿನ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ನೂತನ ಕೊಠಡಿ ಉದ್ಘಾಟನೆ

ಗದಗ: ಸೊರಟೂರ ಗ್ರಾಮದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಶಾಲಾ ಶಿಕ್ಷಣ ಇಲಾಖೆ,ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ವಿವೇಕ ಯೋಜನೆಯಡಿಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ನೂತನ ಕೊಠಡಿಯನ್ನುರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು.

 ಈ ಸಂದರ್ಭದಲ್ಲಿ ಶಾಸಕರಾದ ಜಿ.ಎಸ್.ಪಾಟೀಲ್ ವಾಸಣ್ಣ ಕುರಡಗಿ, ಟಿ ಈಶ್ವರ್, ಸಿದ್ದು ಪಾಟೀಲ್, ಎಸ್ ಡಿ ಎಂ ಸಿ ಅಧ್ಯಕ್ಷತೆ ಸುಮಿತ್ರ ಹರಿಜನ, ಪ್ರಕಾಶ ಹೀರೆಮನಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್ .ಬಾರಟಕಿ ,ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ ನಡುವಿನಮನಿ ಮುಖೋಪಾಧ್ಯಾಯನಿ ವನಿತಾ ವರನೆಕರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.