ಗದಗ : ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ನಗರದ ಹಳೇ ಸರಾಫ್ ಬಜಾರದಲ್ಲಿರುವ ಜಗದಂಬಾ ದೇವಸ್ಥಾನ ಹಾಗೂ ತುಳಜಾ ಭವಾನಿ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದು ಸಮಾಜ ಬಾಂಧವರಿಗೆ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ಪಂಚ ಕಮೀಟಿ ಅಧ್ಯಕ್ಷ ಫಕೀರಸಾ ಬಾಂಡಗೆ, ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ, ಕಾರ್ಯದರ್ಶಿ ರವಿ ಶಿದ್ಲಿಂಗ, ದಸರಾ ಕಮೀಟಿ ಚೇರಮನ್‌ರಾದ ಅನಿಲ್ ಖಟವಟೆ, ಮಹಿಳಾ ಮಂಡಳ, ತರುಣ ಸಂಘದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಮಾಜ ಬಾಂಧವರು ಉಪಸ್ಥಿತರಿದ್ದರು.