ವಿಜಯವಾಣ ಸುದ್ದಿಜಾಲ ಗದಗ
ಲೊಕಸಭಾ ಚುನಾವಣೆಯ ಮತ ಏಣಿಕೆಯು ಜೂ. 4 ರಂದು ಜರುಗಲಿದೆ. ಜಿಲ್ಲಾದ್ಯಂತ ಪ್ರತಿಭಂದಕಾಜ್ಞೆ ಜಾರಿಗೊಳಿಸಲಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದದಲ್ಲಿ ಶನಿವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಮೇ. 7 ರಂದು ಜಿಲ್ಲೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಯಶಸ್ವಿಯಾಗಿದೆ. ಮತ ಏಣಕೆ ಕಾರ್ಯವೂ ಮುಕ್ತ ಹಾಗು ಶಾಂತಿಯುತವಾಗಿ ನಡೆಯಲು ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 3, 2024 ರ ಸಾಯಂಕಾಲ 6 ಗಂಟೆಯಿಂದ ಜೂ. 5, 2024 ರ ಬೆಳಗ್ಗೆ 6 ಗಂಟೆಯವರೆಗೆ ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.ಅದನ್ನು ಎಲ್ಲಾ ರಾಜಕೀಯ ಪಕ್ಷಗಳು ಪಾಲಿಸಬೇಕು ಎಂದರು.
ಮತ ಏಣಿಕೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಜೂ. 4 ರಂದು ಬೆಳಿಗ್ಗೆ 6 ಗಂಟೆಯಿಂದ ಜೂ. 5 ರ ಬೆಳಿಗ್ಗೆ 6 ಗಂಟೆವರೆಗೆ ಶುಷ್ಕ ದಿನಘೋಷಿಸಿದ್ದು ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ಸಂರ್ಪೂಣ ವಾಗಿ ನಿರ್ಭಂದಿಸಿದೆ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅವರು ತಿಳಿಸಿದರು.
ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಗೆದ್ದ ರಾಜಕೀಯ ಪಕ್ಷಗಳ ಅಭ್ಯಥಿರ್ಗಳ ಪರ ಕಾರ್ಯಕರ್ತರು, ಬೆಂಬಲಿಗರು ವಿಜಯೋತ್ಸವ, ಮೆರವಣಿಗೆ ಮಾಡುವುದರಿಂದ ಸೋತ ಅಭ್ಯಥಿರ್ಗಳಿಗೆ ಹಾಗೂ ಅವರ ಪಕ್ಷಗಳ ಮುಖಂಡರಿಗೆ, ಕಾರ್ಯಕರ್ತರಿಗೆ ವಿವಿಧ ರೀತಿಯ ಮನಸ್ಥಾಪಗಳು ಉಂಟಾಗಿ ಈ ಸಮಯದಲ್ಲಿ ಪರಾಭವಗೊಂಡ ಅಭ್ಯಥಿರ್ಗಳು ಮತ್ತು ವಿಜೇತರಾದ ಅಭ್ಯಥಿರ್ ಹಾಗೂ ಬೆಂಬಲಿಗರ ನಡುವೆ ಸಂರ್ಷ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಿರುವ ಸಂದರ್ಭದಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದನ್ನು ನಿಷೇಧಿಸಿದೆ. ಈ ನಿಯಮ ಎಲ್ಲರೂ ಪಾಲಿಸಲು ತಿಳಿಸಿದರು.
ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ಬಗ್ಗೆ ಪ್ರಚೋದನಾತ್ಮಕವಾಗಿ ತೇಜೋವಧೆ ಮಾಡುವಂತಹ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಶವ ಸಂಸ್ಕಾರ ಮದುವೆ ಹಾಗೂ ಧಾಮಿರ್ಕ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಎಂದರು.
ಜಿಪಂ ಸಿಈಒ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಸುರೇಖಾ, ಪ್ರಕಾಶ ಎಂ ನಾಶಿ, ಅಶೋಕ ಮಂದಾಲಿ, ರಮೇಶ ಸಜ್ಜಗಾರ, ಹಾಜಿಅಲಿ ಕೊಪ್ಪಳ ಇತರರು ಇದ್ದರು.