ಜಿಲ್ಲೆ

ವಿಡಿಎಸ್ ಕ್ಲಾಸಿಕ್ ಸಿಬಿಎಸ್ಇ ಶಾಲೆಯಲ್ಲಿ ರಾಜ್ಯೋತ್ಸವ.

Gadag - Shivanand Hiremath
ಗದಗ: ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ಕನ್ನಡ ಮಾತೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಹೂ ಮಾಲೆ ಅರ್ಪಿಸಿ, ಪೂಜೆ ಸಲ್ಲಿಸಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ಕರ್ನಾಟಕ ಏಕೀಕರಣದ ಚಳುವಳಿಯಲ್ಲಿ ಭಾಗವಹಿಸಿದ ಮಹನೀಯರ ಹೋರಾಟದ ಇತಿಹಾಸವನ್ನು ತಿಳಿಯುತ್ತಾ ಅವರ ಆದರ್ಶ ಗುಣಗಳನ್ನು ಹಾಗೂ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಲೆಯ ಶಿಕ್ಷಕರಾದ ಶ್ರೀ ದೇವೇಂದ್ರಪ್ಪ ಅನ್ವೇರಿ ರವರು ಕರ್ನಾಟಕ ಏಕೀಕರಣ ನೆಲ, ಜಲ, ಸಂಸ್ಕೃತಿ, ಸಾಹಿತ್ಯ, ಸಂಗೀತ, ಕಲೆ ಹಾಗೂ ಭಾಷೆಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ತಮ್ಮ ಅನಿಸಿಕೆಯಲ್ಲಿ ವ್ಯಕ್ತಪಡಿಸಿದರು.
ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಮಂಜುಳಾ. ಎಸ್. ರವರು ಕನ್ನಡ ರಾಜ್ಯೋತ್ಸವದ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಾದ ಕು. ಭೀರಪ್ಪ ಇದ್ಲಿ ಹಾಗೂ  ಕು. ಸಾನ್ವಿ ಸೋಮಣ್ಣವರ ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕು. ಸಂಜನಾ ಆರಟ್ಟಿ ಹಾಗೂ ಸಂಗಡಿಗರು, ಕು. ತೇಜಸ್ವಿನಿ ಬಗಾಡೆ  ಹಾಗೂ ಸಂಗಡಿಗರು ಕನ್ನಡ ಮತ್ತು ಶಿಕ್ಷಕರಾದ ಶ್ರೀ ಪಂಪಣ್ಣ ರೊಡ್ಡಾನವರ ಅವರು ನಾಡು ನುಡಿಯ ಕುರಿತು ಹಾಡಗಳನ್ನು ಹಾಡಿದರು. ಕನ್ನಡ ಭಾಷಾ ಶಿಕ್ಷಕಿಯರಾದ ಶ್ರೀಮತಿ ರೇಣುಕಾ ವೆಂಕಟಾಪುರ ರವರು ಶಾಲೆಗೆ ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋವನ್ನು ದೇಣಿಗೆಯಾಗಿ ನೀಡಿದರು.
ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಶೈನಾಜ್ ನದಾಫ್ ಸ್ವಾಗತಿಸಿ ನಿರೂಪಿಸಿದರು, ಶ್ರೀಮತಿ ವಿದ್ಯಾ ಪಾಟೀಲ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕನ್ನಡ ಭಾಷಾ ಶಿಕ್ಷಕಿಯರಾದ ಶ್ರೀಮತಿ ರೇಣುಕಾ ವೆಂಕಟಾಪುರ, ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.