ಗದಗ: ಇತ್ತೀಚಿಗೆ ನಡೆದ ನಗರದ ಶ್ರೀ ಸಿಡಿಓ ಜೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಅಂತರ್ ಶಾಲಾ ಮಟ್ಟದ ಚಿತ್ರಕಲಾ ಹಾಗೂ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಚಿತ್ರಕಲಾ ಸ್ಪರ್ಧೆಯಲ್ಲಿ ಕು. ಸ್ವಸ್ತಿ ಹೊಸುರ, ಕು. ವಿನೀತ್ ನಾಲ್ವಾಡ್, ಕು. ಯುಗ್ ಶೆಡ್ಡಿ, ಕು. ಮನು ದೇವರಕೊಂಡಿ ಹಾಗೂ ವೇಷಭೂಷಣ ಸ್ಪರ್ಧೆಯಲ್ಲಿ ಕು. ಶ್ರೀಕುಮಾರ ಬಡಿಗೇರ ಮತ್ತು ಕು. ಖುಷಿ ಪಾಪಳೆ ಇವರೆಲ್ಲರೂ ಉತ್ತಮ ಪ್ರದರ್ಶನ ನೀಡಿ ಪ್ರಶಂಸೆಯ ಪ್ರಶಸ್ತಿ ಪತ್ರಗಳನ್ನು ಪಡೆದಿರುತ್ತಾರೆ. ಹಾಗೆಯೇ ಇತ್ತೀಚಿಗೆ ಹುಲಕೋಟೆಯಲ್ಲಿ ನಡೆದ ಎನ್. ಸಿ. ಸಿ ಜಿಲ್ಲಾ ಮಟ್ಟದ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಶಿಬಿರಾರ್ಥಿಗಳಾಗಿ ಪ್ರಶಂಸೆ ಪಡೆದ 9ನೇ ತರಗತಿಯ ಕು. ರೇಣುಕಾ ಬಾವಿಕಟ್ಟಿ ಹಾಗೂ ಕು. ದಿವ್ಯಾಶ್ರೀ ಪೂಜಾರ ಅವರು ಪ್ರಶಸ್ತಿ ಪತ್ರಗಳನ್ನು ಪಡೆದಿರುತ್ತಾರೆ, ಪ್ರಶಸ್ತಿ ಪಡೆದ ಎಲ್ಲಾ ಮಕ್ಕಳಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ಹುಯಿಲಗೋಳ ಹಾಗೂ ಶಾಲೆಯ ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀ ಪ್ರತೀಕ. ಎಸ್. ಹುಯಿಲಗೋಳ ರವರು ಈ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ, ಶ್ಲ್ಯಾಘಿಸಿ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ಉಪಸ್ಥಿತರಿದ್ದರು. ಶಾಲೆಯ ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು, ಪಾಲಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.