ಗದಗ: ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿ ಕ್ಲಾಸಿಕ್ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಶಾಲೆಯ ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀ ಪ್ರತೀಕ. ಎಸ್. ಹುಯಿಲಗೋಳ ರವರು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು, ವಿದ್ಯಾರ್ಥಿಗಳು ಕನಿಷ್ಠ ಒಂದು ಸಸಿಯನ್ನು ನೆಟ್ಟು, ಅದನ್ನು ಪೋಷಿಸಿ ಬೆಳಸಬೇಕು. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ ಹಾಗೆಯೇ ಶಾಲೆಯ ಪರಿಸರವನ್ನು ಶುಚಿತ್ವದಿಂಡುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ವರ್ಷಕ್ಕೆ ಒಂದರಂತೆ ಸಸಿಯನ್ನು ನೆಟ್ಟು ಬೆಳಸಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಚಾರ್ಯರಾದ ಶ್ರೀ ಅಕ್ಷಯ್. ಜಿ, ರವರು ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.