ಜಿಲ್ಲೆ

ಮಹಿಳೆಯರ ಮೇಲಿನ ದೌರ್ಜನ್ಯ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮ

Gadag - Shivanand Hiremath
ಗದಗ: ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾರ್ಮಿಕ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಗದಗ ಇವರ ವತಿಯಿಂದ ಸೋಮವಾರ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆಯ ಅಂತರಾಷ್ಟಿçÃಯ ದಿನ” ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಎ.ಸಿ.ಎಂ. ಗಾರ್ಮೇಂಟ್ಸ್ ಗದಗದಲ್ಲಿ ಹಮ್ಮಿಕೊಳ್ಳಲಾಗಿತ್ತು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೆಲಸದ ಸ್ಥಳಗಳಲ್ಲಿ ಮಹಿಳೆ ನೆಮ್ಮದಿಯಿಂದ ಕಾರ್ಯ ನಿರ್ವಹಿಸುವಂತಾಗಲು 10 ಕ್ಕಿಂತ ಹೆಚ್ಚು ಮಹಿಳಾ ಸಿಬ್ಬಂದಿ ಒಂದು ಕೆಲಸದ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಅಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚಿಸಲು ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಕ್ರಮ ವಹಿಸಲು ಸೂಚಿಸಿದರು, ಇಂದು ಸ್ತಿçà ಮತ್ತು ಪುರುಷರು ಇಬ್ಬರೂ ಸಮಾನರು ಆದ್ದರಿಂದ ಪುರುಷರಿಗೆ ಇರುವಷ್ಟು ಎಲ್ಲ ಸೌಕರ್ಯ, ಸೌಲಭ್ಯಗಳು ಮಹಿಳೆಯರಿಗೆ ದೊರಕಬೇಕು ಒಂದು ವೇಳೆ ಯಾವುದೇ ರೀತಿಯ ದೌರ್ಜನ್ಯ, ಅನ್ಯಾಯಗಳು ಆಗುತ್ತಿದ್ದರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ಇಲಾಖೆ ಇಲ್ಲವೆ ಮಹಿಳಾ ಕ್ಷೇತೆದಲ್ಲಿ ಕಾರ್ಯ ನಿರ್ವಹಿಸುವ ಸಂಘ ಸಂಸ್ಥೆಗಳನ್ನು ಸಂಪರ್ಕಿಸಿ ನ್ಯಾಯ ದೊರಕಿಸಿಕೊಳ್ಳಬೇಕೆಂದು ಮಹಿಳೆಯರಿಗೆ ತಿಳಿಸುವುದರ ಜೊತೆಗೆ ಹಲವಾರು ಮಹಿಳಾ ಕಾನೂನುಗಳ ಕಿರು ಮಾಹಿತಿಯನ್ನು ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿಗಳು, ಶ್ರೀಮತಿ. ರಾಧಾ ಜಿ ಮಣ್ಣೂರು ಮಾತನಾಡಿ ಮಿಷನ್ ಶಕ್ತಿ ಯೋಜನೆಯ ಕಾರ್ಯವೈಖರಿ ದೇಶಕ್ಕೆ ಮಾದರಿಯಾಗಬೇಕು ಹಾಗೂ ಮಹಿಳೆಯರು ತಮಗೆ ರಾಜ್ಯಸರರ್ಕಾರ/ ಕೇಂಧ್ರ ಸರ್ಕಾರಗಳು ನೀಡಿದ ಎಲ್ಲ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡು ಅವರು ದೇಶದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಸಮಾಜದ ಎಲ್ಲ ಸ್ಥರದ ಮಹಿಳೆಯರನ್ನು ಜಾಗೃತಗೊಳಿಸುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಎಲ್ಲ ಅಧಿಕಾರಿಗಳ ಗುರುತರವಾದ ಜವಾಬ್ದಾರಿ ಎಂದರು.
ಜಿಲ್ಲಾ ಕಾರ್ಮಿಕ ಅಧೀಕಾರಿ ಶ್ರೀಶೈಲ್ ಸೋಮನಕಟ್ಟಿ, ಇವರು ಮಾತನಾಡಿ ಇಂದು ಮಹಿಳೆಯರು ಸ್ವತಂತ್ರವಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಲು ತಯಾರಿದ್ದಾರೆ. ಆದರೆ ಅವರಿಗೆ ಸರಿಯಾದ ಮಾಹಿತಿ ಸಹಕಾರ ಹಾಗೂ ಮಾರ್ಗದರ್ಶನದ ಕೊರತೆ ಇದೆ. ಮಿಷನ್ ಶಕ್ತಿ ಮುಖ್ಯವಾದ ಉದ್ದೇಶ ಸಮಾಜದ ಪ್ರತಿಯೊಂದು ಸ್ಥರದ ಮಹಿಳೆಯರಿಗೆ ಸಮಯಕ್ಕೆ ಸರಿಯಾಗಿ ಅವರಿಗೆ ಅವಶ್ಯಕ ಇರುವ ಸಂಧರ್ಭದಲ್ಲಿ ಮಾಹಿತಿ, ಸಮಾಲೋಚನೆ, ಅಗತ್ಯ ನೆರವು ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದರು. ಮಿಷನ್ ಶಕ್ತಿ ಯೋಜನೆ ಗುರಿ, ಉದ್ದೇಶ ಹಾಗೂ ರೂಪರೇಷದ ಕುರಿತಯು ವಿವರವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ. ಪದ್ಮಾವತಿ ಜಿ. ಅವರು ಮಾತನಾಡಿ ಇಲಾಖೆಯು ಈಗಾಗಲೇ ಮಹಿಳೆ ಮತ್ತು ಮಕ್ಕಳ ಕ್ಷೇತ್ರದಲ್ಲಿ ಗಣನೀಯವಾದ ಸೇವೆಯನ್ನು ಉದಾಹರಣೆಗೆ ಮಹಿಳೆ ಮತ್ತು ಮಕ್ಕಳ ಅಪೌಷ್ಠಕತೆಯನ್ನು ಹೊಗಲಾಡಿಸಲು ಪೋಷಣ ಅಭಿಯಾನ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಯೋಜನೆ, ಹಲವಾರು ಸೇವೆಗಳು ಒಂದೇ ಕಡೆ ಸಿಗುಂತಾಗಲು ಸಖಿ ಒನ್ ಸ್ಟಾಪ್ ಸೆಂಟರ್, ಗರ್ಭೀಣಿ/ಬಾಣಂತಿಯರಿಗೆ ಆರ್ಥಿಕಸಹಾಯವಾಗಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಭಾಗ್ಯಲಕ್ಷಿö್ಮÃ/ಸುಕನ್ಯ ಸಮೃಧ್ದಿ ಯೋಜನೆ ಹೀಗೆ ಹಲವಾರು ಯೋಜನೆಗಳ ಜೊತೆಗೆ ಮಿಷನ್ ಶಕ್ತಿ ಯೋಜನೆಯು ಸಮಾಜದ ಪ್ರತಿಯೊಬ್ಬ ಹೆಣ್ಣು ಮಗು/ಮಹಿಳೆಯರಿಗೆ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸದರಿ ಯೋಜನೆ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ. ಪ್ರಭಾವತಿ ಮುದಿಗೌಡರ್, ಅಧಿಕ್ಷಕರು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ .ಸೋಮಶೇಖರ ಮಿನಜಗಿ, ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ .ಅಶೋಕ ರಾಠೋಡ, ಮಾಲಿಕರು ಎಸಿಎಂ ಗಾರ್ಮೇಂಟ್ಸ ಗದಗ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಸುಮಾರು 150 ಜನ ಮಹಿಳಾ ಸಿಬ್ಬಂದಿಗಳ ಭಾಗವಸಿದ್ದರು. ಶ್ರೀಧರ ಪೂಜಾರ, ಜಿಲ್ಲಾ ಸಂಯೋಜಕರು ಪ್ರಧಾನಮಂತ್ತಿ ಮಾತೃ ವಂದನಾ ಯೋಜನೆ ಗದಗ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.