ಲಕ್ಷ್ಮೇಶ್ವರದ ಪುರಸಭೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು (Civil servant) ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಿದರು.
ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕರನ್ನು Civil servant ಕೆಲಸದಿಂದ ತೆಗೆದು ಹಾಕಲಾಗಿದೆ. ಅವರನ್ನು ಮರು ನೇಮಕ ಮಾಡಿಕೊಳ್ಳಬೇಕು. ಇಲ್ಲವಾದರೆ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಗುತ್ತಿಗೆ ಪೌರಕಾರ್ಮಿಕರು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಪಟ್ಟಣದ ಪುರಸಭೆಯಲ್ಲಿ ಕಳೆದ ಮಾರ್ಚ್‌ನಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನಾಲ್ಕು ತಿಂಗಳು ಕಾರ್ಯನಿರ್ವಹಿಸಿದ ನಂತರ ಅದರಲ್ಲಿ ಗುತ್ತಿಗೆದಾರ ಎರಡು ತಿಂಗಳ ಗೌರವಧನ ಕೊಟ್ಟು ಇನ್ನೆರಡು ತಿಂಗಳು ಗೌರವಧನ ಕೊಟ್ಟಿಲ್ಲ.
ಕಸ ವಿಲೇವಾರಿಯಲ್ಲಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ಯಂತ್ರಗಳು ದುರಸ್ತಿಗೆ ಬಂದಮೇಲೆ ಕೆಲಸದಿಂದ ತೆಗೆದಿದ್ದರು. ಈಗ ಮತ್ತೆ ಯಂತ್ರ ಸರಿ ಹೋದಮೇಲೆ 10 ಜನರಲ್ಲಿ 6 ಜನರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಂಡು ನಾಲ್ಕು ಜನರನ್ನು ಕೆಲಸದಿಂದ ತಗೆದುಹಾಕಲಾಗಿದೆ.
ಅಲ್ಲದೆ, ನಾಲ್ಕು ಜನರ ಜಾಗಕ್ಕೆ ಬೇರೆಯವರನ್ನು ನೇಮಿಸಿಕೊಂಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಇನ್ನು 2 ದಿನಗಳಲ್ಲಿ ಕೆಲಸಕ್ಕೆ ತೆಗೆದುಕೊಳ್ಳದಿದ್ದರೆ ಪುರಸಭೆ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಬಸವಣೆಪ್ಪ ನಂದೆಣ್ಣವರ, ನೀಲಪ್ಪ ಶಿರಹಟ್ಟಿ, ಪರಮೇಶ ಗಡದವರ, ಅರುಣ ನಂದೆಣ್ಣವರ, ರವಿ ಗಾಂಜಿ, ಕಲ್ಯಾಣಕುಮಾರ ಹಾದಿಮನಿ, ಅಜಿತ ನಂದೆಣ್ಣವರ, ರಾಮಪ್ಪ ಅಯ್ಯಣ್ಣವರ, ಪ್ರಕಾಶ ಗಡದವರ, ಹೊನ್ನಪ್ಪ ಮೆಗಲಮನಿ, ಮಂಜುನಾಥ ದೊಡ್ಡಮನಿ, ಯಲ್ಲಕ್ಕ ಗಡದವರ, ದುರ್ಗವ್ವ ಶಿರಹಟ್ಟಿ, ಇತರರಿದ್ದರು.