ಬಿಹಾರದ ಚುನಾವಣೆಯಲ್ಲಿ Election ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಮುಂಡರಗಿ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು
ಮುಂಡರಗಿ: ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಪ್ರಚಾರ ಕೈಗೊಂಡಿದ್ದ ನೂರು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಕರ್ನಾಟಕದಲ್ಲಿ ಮುಂಬರುವ ಎಲ್ಲ Election ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅದಕ್ಕೆ ಬಿಹಾರ ಚುನಾವಣೆ ಫಲಿತಾಂಶ ಪ್ರೇರಣೆಯಾಗಲಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ ಬಿಹಾರದಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾಡಿದರು.
ಸದ್ಯ ದೇಶದಲ್ಲಿ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಆಡಳಿತವಿದ್ದು, ಮುಂಬರುವ ದಿನಗಳಲ್ಲಿ ಇನ್ನುಳಿದ ರಾಜ್ಯದಲ್ಲೂ ಬಿಜೆಪಿ ಆಡಳಿತಕ್ಕೆ ಬರುವುದು ನಿಶ್ಚಿತ ಎಂದರು.
ರಾಜ್ಯದ ರೈತರು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರ ನಿಗದಿ ಮಾಡಿದ ಬೆಲೆಯಲ್ಲಿ ರಾಜ್ಯ ಸರ್ಕಾರ ಶೀಘ್ರ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಕರಬಸಪ್ಪ ಹಂಚಿನಾಳ, ಆನಂದಗೌಡ ಪಾಟೀಲ, ಎಸ್.ವಿ.ಪಾಟೀಲ, ಡಾ.ಕುಮಾರಸ್ವಾಮಿ ಹಿರೇಮಠ, ಮುದ್ಲಿಂಗಪ್ಪ ಕೊರ್ಲಹಳ್ಳಿ, ಎಸ್.ಎಸ್. ಗಡ್ಡದ, ದೇವಪ್ಪ ಇಟಗಿ, ಎಚ್. ವಿರೂಪಾಕ್ಷಗೌಡ್ರ, ನಾಗೇಶ ಹುಬ್ಬಳ್ಳಿ, ಮಂಜುನಾಥ ಮುಧೋಳ, ಚಿನ್ನಪ್ಪ ವಡ್ಡಟ್ಟಿ, ಯಲ್ಲಪ್ಪ ಗಣಾಚಾರಿ, ಮಲ್ಲಿಕಾರ್ಜುನ ಹಣಜಿ, ದೇವು ಹಡಪದ, ಆನಂದ ನಾಡಗೌಡ್ರ, ರವಿ ಲಮಾಣಿ, ಸೋಮು ಹಕ್ಕಂಡಿ, ಚಿನ್ನಪ್ಪ ವಡ್ಡಟ್ಟಿ, ಪವನ್ ಲೇಡ್ವೆ, ಅಶೋಕ ಚೂರಿ, ಪಾಲಾಕ್ಷಗೌಡ ಪಾಟೀಲ, ಪವಿತ್ರಾ ಕಲ್ಲಕುಟಗರ, ಅರುಣಾ ಪಾಟೀಲ, ಪುಷ್ಪಾ ಉಕ್ಕಲಿ ಇತರರು ಇದ್ದರು.