ಮುಳಗುಂದ ಸಮೀಪದ ಸೊರಟೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (Co-operative:) ಸಹಯೋಗದಲ್ಲಿ ಗೋದಾಮು ನಿರ್ಮಾಣಕ್ಕೆ ಸಚಿವ ಎಚ್.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು. ಮಾಜಿ ಶಾಸಕ ಡಿ.ಆರ್. ಪಾಟೀಲ, ಗುರಣ್ಣ ಬಳಗಾನೂರ, ಸಿದ್ದು ಪಾಟೀಲ, ಪ್ರಮೋದ ಇನಾಮದಾರ, ಭದ್ರೇಶ ಕುಸುಲಾಪೂರ ಇತರರು ಇದ್ದರು. 
ಗದಗ

Co-operative: ಸಹಕಾರಿ ಸಂಘಗಳಿಂದ ಗ್ರಾಮೀಣರ ಬದುಕು ಹಸನು

ಮುಳಗುಂದ: ಸಹಕಾರಿ ಸಂಘಗಳ (Co-operative) ಮೂಲಕ ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಕೃಷಿ ಹಾಗೂ ಕೃಷಿ ಉಪ ಕಸಬುಗಳಿಗೆ ಸಾಲ ಸೌಲಭ್ಯ ನೀಡುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ.

ಸಹಕಾರಿ ಸಂಘಗಳ ಬೆಳವಣಿಗೆಯಿಂದ ಗ್ರಾಮೀಣ ಭಾಗದ ಜನರ ಜೀವನ ಹಸನಾಗುತ್ತದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸೊರಟೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ 500 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮು ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಗ್ರಾಮದ ಸಹಕಾರಿ ಸಂಘಗಳು ರಾಜಕೀಯ ಹೊರತುಪಡಿಸಿ ಸ್ಪರ್ಧಾತ್ಮಕ ಮನೋಭಾವದಿಂದ ಬೆಳೆಯುವಂತಾಗಬೇಕು. ಅಂದಾಗ ಮಾತ್ರ ಸಹಕಾರಿ ಚಳವಳಿಗೆ ಬಲ ಬಂದಂತಾಗುತ್ತದೆ ಎಂದರು.
ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಪ್ಪ ಕಲ್ಲಗುಡಿ ಮಾತನಾಡಿ, ಮುಂದಿನ ದಿನಗಳಲ್ಲಿ ಒಂದು ಕೋಟಿ ರೂ. ವಿಶೇಷ ಅನುದಾನದಲ್ಲಿ ದೊಡ್ಡ ಪ್ರಮಾಣದ ಗೋದಾಮು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.
ಮಾಜಿ ಶಾಸಕ ಡಿ.ಆರ್. ಪಾಟೀಲ, ಗುರಣ್ಣ ಬಳಗಾನೂರ, ಸಿದ್ದು ಪಾಟೀಲ, ಪ್ರಮೋದ ಇನಾಮದಾರ, ಭದ್ರೇಶ ಕುಸುಲಾಪೂರ, ಪರಸಪ್ಪ ಮಲ್ಲಾರಿ, ಫಕೀರಪ್ಪ ಮಟ್ಟಿ, ಪರಶುರಾಮ ಹೂಗಾರ, ರಾಮಣ್ಣ ತಳವಾರ, ಮಹಾಂತೇಶ ಹಳ್ಳಿ, ಮುರುಗೇಶ ಕುಸಲಾಪುರ ಇತರರು ಇದ್ದರು.