DAMAGE ನರೇಗಲ್ಲ ಬಳಿಯ ಜಮೀನಿನಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಪರಿಶೀಲನೆ ಕೈಗೊಂಡರು. ಅಶೋಕ ಬೇವಿನಕಟ್ಟಿ, ಚಂದ್ರು ಹೊನವಾಡ, ಶರಣಪ್ಪ ಧರ್ಮಾಯತ, ಇತರರಿದ್ದರು. 
ಗದಗ

DAMAGE ಬೆಳೆ ಹಾನಿ, ವಾಸ್ತವ ಸ್ಥಿತಿಯ ಸಮಗ್ರ ವರದಿ ಸರ್ಕಾರಕ್ಕೆ

ನರೇಗಲ್ಲ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಕೃಷಿ, ಕಂದಾಯ ಇಲಾಖೆಯ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗುರುವಾರ ವಿವಿಧ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ (DAMAGE) ಸ್ಥಿತಿಗತಿ ಪರಿಶೀಲಿಸಿದರು. ಗದಗ ರಸ್ತೆಯ ಸಮೀಪದ ಕೃಷಿ ಜಮೀನುಗಳಿಗೆ ಭೇಟಿ ನೀಡಿ ಹೆಸರು, ಮೆಕ್ಕೆಜೋಳ, ತೊಗರಿ, ಉಳ್ಳಾಗಡ್ಡಿ, ಶೇಂಗಾ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿರುವುದನ್ನು ವೀಕ್ಷಿಸಿತು. ಕೆಲವು ಕಡೆಗಳಲ್ಲಿ ಗೋವಿನಜೋಳ ಬೆಳೆಗಳು ಒಣಗುವ ಹಂತ ತಲುಪಿರುವುದು ಅಧಿಕಾರಿಗಳ ಗಮನಕ್ಕೆ ಬಂದಿತು.
ರೈತರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿ, ಬೆಳೆಗಳ ಪ್ರಸ್ತುತ ಸ್ಥಿತಿ ಹಾಗೂ ಮಳೆ ಅಭಾವದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಸರ್ಕಾರಕ್ಕೆ ವಾಸ್ತವ ಸ್ಥಿತಿಯ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಬೆಳೆ ವಿಮೆ ನೋಂದಣಿ ಕುರಿತು ಮಾತನಾಡಿ, ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 22ರವರೆಗೆ ವಿಸ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ರೈತರು ಈ ಅವಕಾಶ ಬಳಸಿಕೊಳ್ಳಬೇಕು ಎಂದರು.
ಮಳೆ ಅಭಾವದಿಂದ ಬೆಳೆಗಳು ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹಿಸಿದರು. ಅಶೋಕ ಬೇವಿನಕಟ್ಟಿ, ಚಂದ್ರು ಹೊನವಾಡ, ಶರಣಪ್ಪ ಧರ್ಮಾಯತ, ಯಲ್ಲಪ್ಪ ಮಣ್ಣವಡ್ಡರ, ಬಸನಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಶರಣಪ್ಪ ಗಂಗರಗೊಂಡ, ಆನಂದ ಕೊಟಗಿ,ಸಂಗಯ್ಯ ಶಾಂತಯ್ಯನಮಠ, ಶಶಿಧರ ಸಂಕನಗೌಡ್ರ, ಯಲ್ಲಪ್ಪ ಮಣ್ಣೊಡ್ಡರ, ಇತರರಿದ್ದರು.