ಶಿರಹಟ್ಟಿ ತಾಪಂ ಕಾರ್ಯಾಲಯದಲ್ಲಿ ಪಂಚ ಗ್ಯಾರಂಟಿ ಯೋಜನೆ (Guarantee scheme)ಪ್ರಗತಿ ಪರಿಶೀಲನಾ ಸಭೆಯಲ್ಲಿ ವೀರಯ್ಯ ಮಠಪತಿ ಮಾತನಾಡಿದರು. 
ಗದಗ

ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಿಸಿ Guarantee scheme

ಶಿರಹಟ್ಟಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ Guarantee scheme ಮಹತ್ವವನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯಗಳನ್ನು ತಲುಪಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಿರಹಟ್ಟಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೀರಯ್ಯ ಮಠಪತಿ ಹೇಳಿದರು.
ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶಿರಹಟ್ಟಿ ತಾಲೂಕು ಇನ್ನೂ ಪ್ರಗತಿ ಹೆಚ್ಚಿಸಬೇಕು. ಸಮಿತಿ ಸದಸ್ಯರ ಸಹಕಾರದೊಂದಿಗೆ ಯೋಜನೆಯ ಶೇ. 100ರಷ್ಟು ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದರು.
ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲೀಕರಿಸುವ ಮಹತ್ತರ ಉದ್ದೇಶ ಹೊಂದಿವೆ. ಆದ್ದರಿಂದ, ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯುವಲ್ಲಿ ವಿಳಂಬವಾಗಬಾರದು. ಗ್ಯಾರಂಟಿ ಯೋಜನೆ ಅನುಷ್ಠ್ಠಾನದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಇರಬೇಕು ಎಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಶಿರಹಟ್ಟಿ ಸಮಿತಿ ಸದಸ್ಯರು, 14 ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆಹಾರ ಇಲಾಖೆ, ವಿದ್ಯುತ್ ಸರಬರಾಜು ಇಲಾಖೆ, ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳು ಇದ್ದರು.