CROP LOSSಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆ ಹಾನಿ 
ಗದಗ

CROP LOSS ಬೆಳೆ ವಿಮೆ ಪರಿಹಾರ ವಿತರಿಸಲು ಆಗ್ರಹ

ನರಗುಂದ: ತಾಲೂಕಿನಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆಗಳನ್ನು (CROP LOSS )ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣವೇ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜೆಡಿಎಸ್ ತಾಲೂಕಾಧ್ಯಕ್ಷ ಎಂ.ಎಂ. ಜಾವೂರ ಆಗ್ರಹಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ತಾಲೂಕಿನ ಬಹುತೇಕ ರೈತರ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಬೆಳೆವಿಮೆ ಪರಿಹಾರಕ್ಕಾಗಿ ತಾಲೂಕಿನ 14 ಸಾವಿರಕ್ಕೂ ಅಧಿಕ ರೈತರು ವಂತಿಗೆ ಭರಿಸಿದ್ದಾರೆ. ಆದರೆ, ಇದುವರೆಗೆ ಪರಿಹಾರಧನ ಬಂದಿಲ್ಲ. ರಾಜ್ಯ ಸರ್ಕಾರ ಬೆಳೆಹಾನಿ ಪರಿಹಾರದಲ್ಲೂ ತಾರತಮ್ಯ ಎಸಗುತ್ತಿದೆ. ಈ ಕುರಿತು ಕೃಷಿ ಇಲಾಖೆ, ವಿಮೆ ಕಂಪನಿ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಕಾಟಾಚಾರಕ್ಕೆ ಪ್ರಾರಂಭಿಸಲಾಗಿದೆ. ರೈತರು ಕೆಲಸ ಬಿಟ್ಟು ನೋಂದಣಿಗೆ ಅಲೆದಾಡುವಂತೆ ಮಾಡಿದ್ದಾರೆ. ಗೋವಿನಜೋಳ ಬೆಳೆದ ಪ್ರತಿಯೊಬ್ಬ ರೈತರ ಹೆಸರು ನೋಂದಣಿ ಮಾಡಿಕೊಳ್ಳಬೇಕು. ನಿಗದಿತ ಉತ್ಪನ್ನ ಖರೀದಿಸಿ ತಕ್ಷಣ ಹಣ ಪಾವತಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.!