ವಿವಿಧ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ರೋಣದಲ್ಲಿ ಮಂಗಳವಾರ ಉಪ ತಹಸೀಲ್ದಾರ್ ಜೆ.ಟಿ. ಕೊಪ್ಪದ ಅವರಿಗೆ ಮನವಿ ಸಲ್ಲಿಸಿದರು. ಸಚಿನ್ ಕುಂದರಗಿ, ವಿಶ್ವನಾಥ ಕುರಿ, ನೀಲಮ್ಮ ತಳವಾರ, ಕೌಶಲ್ಯ ಚವಡಿ, ಗಂಗಮ್ಮ ಜಗಾಪೂರ, ಸಾನ್ಯಾ ಸೊಟಕನಾಳ, ಜ್ಯೋತಿ ಹಡಪದ ಇತರರು ಇದ್ದರು.
ರೋಣ: ರಾಜ್ಯ ಸರ್ಕಾರದ (government) ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಜೆ.ಟಿ. ಕೊಪ್ಪದ ಅವರಿಗೆ ಮನವಿ ಸಲ್ಲಿಸಿದರು.
ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಚಿನ್ ಕುಂದರಗಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿವೆ, ಅವುಗಳನ್ನು ಭರ್ತಿ ಮಾಡದೆ ಸರ್ಕಾರ ಯುವಜನರನ್ನು ಉದ್ಯೋಗ ವಂಚಿತರನ್ನಾಗಿ ಮಾಡುತ್ತಿದೆ, ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ವಿಶ್ವ ವಿದ್ಯಾಲಯಗಳಿಗೆ ಅನುದಾನ ನೀಡಬೇಕು, ಸಮರ್ಪಕವಾಗಿ ವಿದ್ಯಾರ್ಥಿ ವೇತನ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಫಲಿತಾಂಶ ಪ್ರಕಟಿಸಿ ಅಂಕಪಟ್ಟಿ ನೀಡಬೇಕು, ವಿವಿಧ ಇಲಾಖೆಯಲ್ಲಿ ಆಯ್ಕೆ ಸಂದರ್ಭದಲ್ಲಿ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕು ಸಂಚಾಲಕ ವಿಶ್ವನಾಥ ಕುರಿ, ನೀಲಮ್ಮ ತಳವಾರ, ಕೌಶಲ್ಯ ಚವಡಿ, ಗಂಗಮ್ಮ ಜಗಾಪೂರ, ಸಾನ್ಯಾ ಸೊಟಕನಾಳ, ಜ್ಯೋತಿ ಹಡಪದ ಇತರರು ಇದ್ದರು.