DROUGT ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.  
ಗದಗ

DROUGT ಗಜೇಂದ್ರಗಡ ‘ಬರಪೀಡಿತ’ ಘೋಷಿಸಲು ಆಗ್ರಹ

ರವಿ ಎಸ್. ಬಳೂಟಗಿ
ಗಜೇಂದ್ರಗಡ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಕೃಷಿ ಚಟುವಟಿಕೆಗೆ ತೀವ್ರ ಹಿನ್ನಡೆ ಆಗಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿ ರೈತರು ಆರ್ಥಿಕ (DROUGT ) ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಗಜೇಂದ್ರಗಡ ತಾಲೂಕು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸಂಗಪ್ಪ ದಂಡಿನ ಮಾತನಾಡಿ, ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಜೋಳ, ಸಜ್ಜೆ, ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಒಣಗಿವೆ. ರೈತರು ಹಾಕಿದ ಬಂಡವಾಳ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿಯನ್ನೇ ನಂಬಿ ಜೀವನ ಸಾಗಿಸುವ ಸಾವಿರಾರು ರೈತ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಸರ್ಕಾರ ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ನೈಜ ವರದಿ ಆಧರಿಸಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ರೈತ ಸಂಘದ ನರೇಗಲ್ಲ ಘಟಕದ ಅಧ್ಯಕ್ಷ ಶರಣಪ್ಪ ಧರ್ಮಾಯತ ಮಾತನಾಡಿ, ರೈತರಿಗೆ ಬೆಳೆಹಾನಿ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು, ಕೃಷಿ ಹಾಗೂ ಸಹಕಾರಿ ಬ್ಯಾಂಕ್‌ಗಳ ಸಾಲ ಮರುಪಾವತಿಗೆ ಕಾಲಾವಕಾಶ ನೀಡಬೇಕು. ಬಡ್ಡಿ ಮನ್ನಾ ಸೇರಿದಂತೆ ವಿಶೇಷ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಾನುವಾರುಗಳಿಗೆ ಮೇವು ಕೊರತೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಮೇವು ಬ್ಯಾಂಕ್‌ಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಜತೆಗೆ ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡಿ ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ಮುಂದಾಗಬೇಕು. ರೈತ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಬೇಕು. ಮಧ್ಯಂತರ ಪರಿಹಾರವನ್ನು ಬೆಳೆವಿಮೆ ಕಂಪನಿಯನ್ನು ನೀಡಬೇಕೆಂದು ಎಂದರು.