ಡಾ.ಅನ್ನದಾನೀಶ್ವರ ಶಿವಯೋಗಿಗಳು 
ಗದಗ

Award ಡಾ.ಅನ್ನದಾನೀಶ್ವರ ಶ್ರೀಗಳಿಗೆ ಚುಟುಕು ಭೂಷಣ ಪ್ರಶಸ್ತಿ

ಮುಂಡರಗಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನಿಂದ ಕೊಡ ಮಾಡುವ ಚುಟುಕು ಭೂಷಣ ಪ್ರಶಸ್ತಿಗೆ ನಾಡೋಜ ಡಾ.ಅನ್ನದಾನೀಶ್ವರ ಶಿವಗಳವರು ಭಾಜನರಾಗಿದ್ದಾರೆ. ಶ್ರೀಗಳಿಗೆ ಆ. 13ರಂದು ಶ್ರೀಮಠದ ಆಶ್ರಯದಲ್ಲಿ ನಡೆಯುವ ರಾಜ್ಯಮಟ್ಟದ ಲೇಖಕಿಯರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಹಾಗೂ ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ತಿಳಿಸಿದ್ದಾರೆ.
ಈ ಕುರಿತು ಗುರುವಾರ ಪ್ರಕಟಣೆ ನೀಡಿರುವ ಅವರು, ಶ್ರೀಗಳು ಅಗ್ರಮಾನ್ಯ ಸಾಹಿತಿಗಳಾಗಿದ್ದು, 300ಕ್ಕೂ ಹೆಚ್ಚು ಚುಟುಕುಗಳನ್ನು ಬರೆದಿದ್ದಾರೆ. 160ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಶ್ರೀಗಳು ಧಾರ್ಮಿಕ, ಸಾಮಾಜಿಕ, ಜನಪರ ಕಾಳಜಿಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ರಾಜ್ಯಮಟ್ಟದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನ ಸರ್ವಾಧ್ಯಕ್ಷರಾಗಿಯೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಶ್ರೀಮಠದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಮ್ಮೇಳನ, ರಾಜ್ಯಮಟ್ಟದ ಸಮ್ಮೇಳನ, ಅಖಂಡ ಧಾರವಾಡ ಜಿಲ್ಲಾ ಸಮ್ಮೇಳನವನ್ನು ಸಂಘಟಿಸುವ ಮೂಲಕ ಕಚುಸಾಪದ ಬೆಳವಣಿಗೆಗೆ ಕಾರಣಿಕರ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.