ಮುಂಡರಗಿ ಪಟ್ಟಣದ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚೈತನ್ಯ ಶಿಕ್ಷಣ ಹಾಗೂ ಗ್ರಾಮಾಭಿವೃದ್ಧಿ ಸಂಸ್ಥೆ ನಿರ್ದೇಶಕಿ ವೀಣಾ ಪಾಟೀಲ ಅವರಿಗೆ ಕದಳಿಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಮಕೃಷ್ಣ ದೊಡ್ಡಮನಿ, ಕೆ.ಎ.ಬಳಿಗೇರ, ಸುಧಾ ಹುಚ್ಚಣ್ಣವರ, ಸೀತಾ ಬಸಾಪೂರ, ಶೋಭಾ ಮೇಟಿ, ಇತರರಿದ್ದರು.
ವಿಜಯವಾಣಿ ಸುದ್ದಿಜಾಲ ಮುಂಡರಗಿ
ಎಲ್ಲರೂ ಮಹಿಳೆಯರ ಸಾಧನೆ ಗೌರವಿಸುವುದರ ಜತೆಗೆ ಲಿಂಗ ಸಮಾನತೆ ಬಗ್ಗೆ ಜಾಗೃತಿ ಮೂಡಿಸಲಿ ಎಂದು ಶರಣ ಸಾಹಿತ್ಯ ಪರಿಷತ್ ಗದಗ ಜಿಲ್ಲಾಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.
ಪಟ್ಟಣದ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕದಳಿ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಮುಂಡರಗಿ ಕದಳಿ ಮಹಿಳಾ ವೇದಿಕೆ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಸುಧಾ ಹುಚ್ಚಣ್ಣವರ ಮಾತನಾಡಿ, ಮಹಿಳೆಯರು ಈಗ ಎಲ್ಲ ರಂಗದಲ್ಲಿ ವಿಶೇಷ ಸಾಧನೆ ಮಾಡುತ್ತಿದ್ದಾರೆ. ಪುರುಷರಷ್ಟೇ ಸರಿಸಮಾನರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷೆ ಸೀತಾ ಬಸಾಪೂರ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಂಡರಗಿಯ ಚೈತನ್ಯ ಶಿಕ್ಷಣ ಹಾಗೂ ಗ್ರಾಮಾಭಿವೃದ್ಧಿ ಸಂಸ್ಥೆಯ ನಿರ್ದೇಶಕಿ ವೀಣಾ ಪಾಟೀಲ ಅವರಿಗೆ ಕದಳಿಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷೆ ಶೋಭಾ ಮೇಟಿ, ಶಶಿಕಲಾ ಕುಕನೂರ, ಎಸ್.ಆರ್. ಬಸಾಪೂರ, ವೀರಣ್ಣ ಮಡಿವಾಳರ, ಎಸ್.ಬಿ.ಕೆ. ಗೌಡರ, ಶರಣಪ್ಪ ಕುಬಸದ ಉಪಸ್ಥಿತರಿದ್ದರು. ನಯನಾ ಅಳವಂಡಿ ಪ್ರಾರ್ಥಿಸಿದರು. ಪ್ರತಿಭಾ ಹೊಸಮನಿ ಸ್ವಾಗತಿಸಿದರು. ಲತಾ ಕಡ್ಡಿ ನಿರೂಪಿಸಿದರು. ಮಂಜುಳಾ ಇಟಗಿ ವಂದಿಸಿದರು.
15ಎಂಡಿಜಿ2 ಮಹಿಳಾ ಫೋಟೋ ಶೀರ್ಷಿಕೆ: