ಲಕ್ಷ್ಮೇಶ್ವರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ರಸಪ್ರಶ್ನೆ ಸ್ಪರ್ಧೆಯನ್ನು ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ ಉದ್ಘಾಟಿಸಿದರು. ಈಶ್ವರ ಮೆಡ್ಲೇರಿ, ಎಸ್.ಡಿ. ಲಮಾಣಿ, ಇತರರಿದ್ದರು. 
ಗದಗ

QUIZ ವಿದ್ಯಾರ್ಥಿಗಳಲ್ಲಿ ರಾಷಟ್ರೆಪ್ರಜ್ಞೆ ಮೂಡಿಸುವುದು ಅಗತ್ಯ

ಲಕ್ಷ್ಮೇಶ್ವರ: ರಾಷ್ಟ್ರೀಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ರಾಷಟ್ರೆಪ್ರಜ್ಞೆ ಮೂಡಿಸುವ ಮುಖ್ಯ ಮಾರ್ಗಗಳಾಗಿದ್ದು ಇವು ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾಗದೇ ರಾಷಟ್ರೆದ ಬಗ್ಗೆ ಅಭಿಮಾನ ಮೂಡಿಸುವಂತಾಗಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ ಅಭಿಪ್ರಾಯಪಟ್ಟರು.
ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಿಂದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಭವನದಲ್ಲಿ ನಗರ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಂವಿಧಾನ ಕುರಿತು ರಸಪ್ರಶ್ನೆ (QUIZ)ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡಿಸುವ ಜತೆಗೆ ದೇಶಭಕ್ತಿ ಬಿತ್ತುತ್ತವೆ. ಪಠ್ಯಶಿಕ್ಷಣದ ಹೊರತಾಗಿಯೂ ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ಹೊಂದಬೇಕು. ಅದಕ್ಕಾಗಿ ದಿನಪತ್ರಿಕೆ, ಸ್ಪರ್ಧಾತ್ಮಕ ಪತ್ರಿಕೆಗಳನ್ನು ಓದಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಗುರುಮಾತೆ ಜೆ.ವಿ. ಅರಳಿಕಟ್ಟಿ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಮುಳುಗದೆ ಪುಸ್ತಕವನ್ನು ಓದಿ ತಲೆಯೆತ್ತಿ ನಡೆಯಬೇಕು. ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆ ಹೊರ ತರುವುದಕ್ಕೆ ಇಂತಹ ರಸಪ್ರಶ್ನೆ ಸ್ಪರ್ಧೆಗಳು ಬಹಳಷ್ಟು ಉತ್ತಮ ವೇದಿಕೆ ಒದಗಿಸುತ್ತವೆ. ಆ ಕಾರಣಕ್ಕಾಗಿ ತಾಲೂಕು ಆಡಳಿತಕ್ಕೆ ಧನ್ಯವಾದಗಳು ಎಂದರು.