Lokayuktaಶಿರಹಟ್ಟಿಯ ಡಾ ಎನ್. ಎಚ್. ಓಲೆಕಾರ ಅವರ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸಿತು.  
ಗದಗ

Lokayukta ಲೋಕಾಯುಕ್ತದಿಂದ ಏಕಕಾಲಕ್ಕೆ ಏಳು ಕಡೆ ದಾಳಿ

ರವಿ ಎಸ್. ಬಳೂಟಗಿ
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕು ಪಂಚಾಯಿತಿಯಲ್ಲಿ ರಾಜ್ಯ ಹಣಕಾಸು ಆಯೋಗದಿಂದ ಮಂಜೂರಾಗಿದ್ದ ಅನುದಾನ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ (Lokayukta ) ಪೊಲೀಸರು ಮಂಗಳವಾರ ಏಕಕಾಲಕ್ಕೆ ಏಳು ಸ್ಥಳಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಏನಿದು ಪ್ರಕರಣ? 2023- 24ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ತಾಲೂಕು ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಶಿರಹಟ್ಟಿ ತಾಪಂಗೆ ಮಂಜೂರಾಗಿದ್ದ ಒಟ್ಟು 2.17 ಕೋಟಿ ಅನುದಾನದಲ್ಲಿ 1.97 ಕೋಟಿ ರೂ.ಗಳಷ್ಟು ದುರ್ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. ಶಾಲೆಗಳು, ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಪೂರೈಸಿ ಕಾಮಗಾರಿಯನ್ನು ಕೈಗೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಗದಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಮಂಗಳವಾರ ದಾಳೆ ನಡೆಸಿ ಪರಿಶಿಲನೆ ನಡೆಸಲಾಗಿದೆ.