ಮುಂಡರಗಿಯಲ್ಲಿ ರಾಜ್ಯ ರೈತ ಸಂಘದ ಕಾರ್ಯಕರ್ತರು ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಅವರಿಗೆ (MAIZE) ಸೋಮವಾರ ಮನವಿ ಸಲ್ಲಿಸಿದರು. ನಟರಾಜ ಸವಡಿ, ಮಲ್ಲಿಕಾರ್ಜುನ ಹಿರೇಮಠ, ನಾಗವೇಣಿ ಇತರರಿದ್ದರು.
ಮುಂಡರಗಿ: ಮೆಕ್ಕೆಜೋಳ ಖರೀದಿ ಕೇಂದ್ರ ಶೀಘ್ರ ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಕಾರ್ಯಕರ್ತರು ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‌ಗೆ 2,400 ರೂ. ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಘೋಷಿಸಿದ್ದಾರೆ. ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ತಂದರೆ ರೈತರಿಗೆ ಲಾಭವಾಗುತ್ತದೆ. ಇಲ್ಲವಾದರೆ ರೈತರು ತಮ್ಮ ಹಣಕಾಸಿನ ಅಡಚಣೆಗೆ ಕಡಿಮೆ ದರಕ್ಕೆ ಫಸಲನ್ನು ದಲ್ಲಾಳಿಗಳಿಗೆ ಮಾರಾಟ ಮಾಡುತ್ತಾರೆ. ಹೀಗಾದರೆ ಬೆಂಬಲ ಬೆಲೆಯ ಲಾಭ ದಲ್ಲಾಳಿಗಳ ಪಾಲಾಗುತ್ತದೆ. ಮೆಕ್ಕೆಜೋಳ ಖರೀದಿ ಕೇಂದ್ರ ಆದಷ್ಟು ಬೇಗ ಆರಂಭಿಸಬೇಕು. ಇಲ್ಲದಿದ್ದರೆ ಬೆಳೆಗಾರರು ಬೀದಿಗಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನಟರಾಜ ಸವಡಿ, ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ, ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಬಸವರಾಜ ದೇಸಾಯಿ, ಬಸವರಾಜ ನವಲಗುಂದ, ಸತ್ಯಮ್ಮ ಮನ್ನೂರ, ಮಹಮ್ಮದಅಲಿ ಬಾವಾಜಿ, ಧೃವಕುಮಾರ ಹೂಗಾರ, ದ್ಯಾಮಣ್ಣ ತಿಮ್ಮಾಪೂರ, ಸೈನಾಜ್ ನದಾಫ್, ಶಬೀರ ನದಾಫ್, ಕೈರುಂಬಿ ಡಂಬಳ ಇತರರು ಇದ್ದರು.