ಶಿರಹಟ್ಟಿಯ ಡಿ. ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ನಗರ ಜೀವನೋಪಾಯ ಅಭಿಯಾನ ಹಾಗೂ ಪಿಎಂ- ಸ್ವನಿಧಿ ಯೋಜನೆಯ ಕಾರ್ಯಕ್ರಮವನ್ನು ಪಪಂ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ಉದ್ಘಾಟಿಸಿದರು.  
ಗದಗ

FUND ಬೀದಿಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಆಸರೆ

ಶಿರಹಟ್ಟಿ: ರಾಷ್ಟ್ರೀಯ ಜೀವನೋಪಾಯ ಅಭಿಯಾನವು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ, ವಿಶೇಷವಾಗಿ ಬೀದಿ ವ್ಯಾಪಾರಸ್ಥರಿಗೆ ಆರ್ಥಿಕ ಸ್ವಾವಲಂಬನೆ ತರುವ ಮಹತ್ವದ ಯೋಜನೆ(FUND)ಯಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ಹೇಳಿದರು.
ಗುರುವಾರ ಪಟ್ಟಣದ ಡಿ. ದೇವರಾಜ ಅರಸು ಭವನದಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಹಾಗೂ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯಡಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಪಿಎಂ ಸ್ವನಿಧಿ ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ, ಡಿಜಿಟಲ್ ವಹಿವಾಟುಗಳಿಗೆ ಉತ್ತೇಜನ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂದು ತಿಳಿಸಿದರು.
ಯುಪಿಐ, ರೂಪೇ, ಕ್ರೆಡಿಟ್ ಕಾರ್ಡ್ ಮೂಲಕ ತುರ್ತು ವ್ಯಾಪಾರ ಹಾಗೂ ವೈಯಕ್ತಿಕ ಅಗತ್ಯಗಳಿಗೆ ಸುಲಭ ಸಾಲ ಸೌಲಭ್ಯ ದೊರೆಯಲಿದೆ. ಡಿಜಿಟಲ್ ವಹಿವಾಟು ಅಳವಡಿಸಿಕೊಂಡ ವ್ಯಾಪಾರಿಗಳಿಗೆ ರೂ. 1,600ರ ವರೆಗೆ ಕ್ಯಾಶ್‌ಬ್ಯಾಕ್ ಪ್ರೋತ್ಸಾಹ ನೀಡಲಾಗುತ್ತಿದೆ. ಜತೆಗೆ ಉದ್ಯಮಶೀಲತೆ, ಆರ್ಥಿಕ ಸಾಕ್ಷರತೆ, ಡಿಜಿಟಲ್ ಕೌಶಲ ಮತ್ತು ಮಾರುಕಟ್ಟೆ ಅರಿವು ಹೆಚ್ಚಿಸುವ ಉದ್ದೇಶದಿಂದ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಎಫ್‌ಎಸ್‌ಎಸ್, ಎಐ ಸಹಯೋಗದಲ್ಲಿ ಬೀದಿಬದಿಯ ಆಹಾರ ಮಾರಾಟಗಾರರಿಗೆ ನೈರ್ಮಲ್ಯ ಮತ್ತು ಆಹಾರ ಸುರಕ್ಷತಾ ತರಬೇತಿ ನೀಡಲಾಗುವುದು. ಸ್ವ-ನಿಧಿ ಸೇ ಸಮೃದ್ಧಿ ಉಪಕ್ರಮದಡಿ ಮಾಸಿಕ ಲೋಕ ಕಲ್ಯಾಣ ಮೇಳಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಫಲಾನುಭವಿಗಳಿಗೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.