ಲಕ್ಷ್ಮೇಶ್ವರದ ಸ್ಕೂಲ್ ಚಂದನದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನ (Science Day) ಆಚರಿಸಲಾಯಿತು. 
ಗದಗ

science day: ವಿಜ್ಞಾನಕ್ಕೆ ಜಾಗತಿಕ ಮನ್ನಣೆ ತಂದವರು ಸಿ.ವಿ.ರಾಮನ್

ಲಕ್ಷ್ಮೇಶ್ವರ: ಪಟ್ಟಣದ ಸ್ಕೂಲ್‌ಚಂದನದಲ್ಲಿ ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ.ವಿ. ರಾಮನ್ ಅವರ ಜನ್ಮದಿನವನ್ನು (science day) ಅಪೂರ್ವ ಸಾಧನೆಯ ನೆನಪಿನ ದಿನವಾಗಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಗದಗದ ಚಿಕ್ಕಟ್ಟಿ ಪಿಯು ವಿಜ್ಞಾನ ಕಾಲೇಜಿನ ಪ್ರೊ.ಎಸ್.ವೈ. ಚಿಕ್ಕಟ್ಟಿ ಮಾತನಾಡಿ, ‘ಭೌತ ವಿಜ್ಞಾನಿ, ನೋಬೆಲ್ ಪ್ರಶಸ್ತಿ ಪುರಸ್ಕೃತ, ಶಬ್ದ, ಬೆಳಕು, ವರ್ಣಮಯ ಬೆಳಕು ಚೆಲ್ಲಿದ ಧೀಮಂತ ಸಂಶೋಧಕ, ಭೌತವಿಜ್ಞಾನಕ್ಕೆ ಹೊಸ ಆಯಾಮ ನೀಡಿ ಶಾಶ್ವತಕೀರ್ತಿ ಪಡೆದ ಸರ್ ನೋಬೆಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಪ್ರೊ. ಸರ್ ಸಿ.ವಿ.ರಾಮನ್ನರ ರಾಮನ್ ಪರಿಣಾಮದ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ. ವಿಜ್ಞಾನಕ್ಕೆ ಜಾಗತಿಕ ಮನ್ನಣೆ ತಂದು ಕೊಟ್ಟ ಅವರನ್ನು ಭಾರತ ಹೆಮ್ಮೆಯಿಂದ ಸ್ಮರಿಸುತ್ತದೆ ಮತ್ತು ವಿಜ್ಞಾನವು ನಿಜವಾಗಿಯು ನಮ್ಮ ವರ್ತಮಾನ ಮತ್ತು ಭವಿಷ್ಯವನ್ನು ರೂಪಿಸುವ ಪ್ರಬಲ ಕೊಡುಗೆಯಾಗಿದೆ ಎಂದು ಹೇಳಿದರು.
ಪ್ರೊ.ಸಿ.ಎನ್.ರಾಮನ್ ಅವರ ಶಿಷ್ಯರಾದ ಭಾರತರತ್ನ ಪ್ರೊ. ಸಿ.ಎನ್.ಆರ್ ರಾವ್‌ರವರು ಸ್ಕೂಲ್ ಚಂದನದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಿ ವಿಜ್ಞಾನದ ಆಸಕ್ತಿ ಬೆಳೆಯಲು ಕಾರಣರಾಗಿದ್ದಾರೆ. ಪ್ರತಿ ವರ್ಷ ರಾಷ್ಟೀಯ ಮತ್ತು ಅಂತಾರಾರಾಷ್ಟ್ರೀಯ ವಿಜ್ಞಾನ ವಿಸ್ತತ ಕಾರ್ಯಕ್ರಮಗಳನ್ನು ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಮಾತನಾಡಿ, ‘ವೈಜ್ಞಾನಿಕ ಮನೋಭಾವನೆಗಳನ್ನು ಪೋಷಿಸುವುದು, ಪ್ರಶ್ನಿಸುವುದು, ಪ್ರಯೋಗಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಯುತ್ತದೆ. ಪ್ರತಿಯೊಬ್ಬರು ಹೊಸ ಆವಿಷ್ಕಾರಗಳ ಮುಖಾಂತರ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು.
ಪ್ರಾಂಶುಪಾಲ ಆರ್.ಜಿ. ಬಾವಾನವರ, ಶಿಕ್ಷಕರು, ಸಿಬ್ಬಂದಿ ಇದ್ದರು. ವೃಷ್ಟಿ, ಅಶ್ವಿನಿ, ಪ್ರಿಯಾಂಕ ಕಾರ್ಯಕ್ರಮ ನಿರ್ವಹಿಸಿದರು.