ಮುಂಡರಗಿ ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವರ ಮಹಾರಥೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು. 
ಗದಗ

ಶಿಂಗಟಾಲೂರು ವೀರಭದ್ರೇಶ್ವರ ರಥೋತ್ಸವ

ಮುಂಡರಗಿ: ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ಪ್ರಯುಕ್ತ ಸೋಮವಾರ ಭಕ್ತರ ಜಯಘೋಷಗಳ ಮಧ್ಯೆ ಮಂಗಳ ವಾದ್ಯಮೇಳಗಳೊಂದಿಗೆ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಜಾತ್ರಾ ಮಹೋತ್ಸವ ನಿಮಿತ್ತ ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಭಕ್ತರು ಸರದಿಯಲ್ಲಿ ನಿಂತು ದರ್ಶನ ಪಡೆದು ವೀರಭದ್ರೇಶ್ವರ ದೇವರ ಕೃಪೆಗೆ ಪಾತ್ರರಾದರು. ಶ್ರೀ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ, ಡಾ.ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಅಭಿನವ ಸಿದ್ಧವೀರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ಪದಾಧಿಕಾರಿಗಳು ಭಾಗವಹಿಸಿದ್ದರು.