SUPERSTION : ನರಗುಂದ ಶ್ರೀ ಯಡೆಯೂರ ಸಿದ್ಧಲಿಂಗೇಶ್ವರ ಬಿಇಡಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಡಾ. ರೇಣುಕಾ ಕೊರವನವರ ಉದ್ಘಾಟಿಸಿದರು.
ನರಗುಂದ: ಬಾಲ್ಯ ವಿವಾಹ, ಅನಕ್ಷರತೆ, ಮೂಢನಂಬಿಕೆ, ಗಂಡು ಸಂತಾನದ ವ್ಯಾಮೋಹದಿಂದ (SUPERSTION) ಭಾರತದಲ್ಲಿ ಜನಸಂಖ್ಯೆ ಹೆಚ್ಚಳಕ್ಕೆ ಮುಖ್ಯ ಕಾರಣವಾಗಿವೆ. ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಗರ್ಭಿಣಿ, ಬಾಣಂತಿಯರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರೇಣುಕಾ ಕೊರವನವರ ತಿಳಿಸಿದರು.
ಶ್ರೀ ಯಡೆಯೂರ ಸಿದ್ಧಲಿಂಗೇಶ್ವರ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂಪರ್ಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ ಕಾರ್ಯಾಲಯ, ಎನ್‌ಎಸ್‌ಎಸ್ ಘಟಕದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜನಸಂಖ್ಯೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಶಾಶ್ವತ ಅಥವಾ ತಾತ್ಕಾಲಿಕ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಆರ್.ಬಿ.ಪಾಟೀಲ, ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಎಂ.ಈ. ವಿಶ್ವಕರ್ಮ, ಆರೋಗ್ಯ ಇಲಾಖೆ ಆಪ್ತ ಸಮಾಲೋಚಕ ಎನ್.ಎಲ್. ಮಡಿವಾಳರ ಮಾತನಾಡಿದರು. ಸಿ.ಎಫ್. ಕುಂಬಾರ, ಡಾ. ಮಂಜುನಾಥ ಕುದರಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಅನಿಲ ಹಟ್ಟಿ, ಶಶಿಕಲಾ ಬೇಡಗೌಡರ, ಕಾವೇರಿ ನಾಯ್ಕರ, ಪವಿತ್ರಾ ರೋಣದ, ಅಕ್ಷತಾ ಯಡಹಳ್ಳಿ, ಲಿಂಗಬಸಪ್ಪ ಚಿಕ್ಕಬಾವಿ, ಅಭಿಷೇಕ ಓಲೇಕಾರ, ಇತರರಿದ್ದರು.