ನರಗುಂದದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ school ಮಕ್ಕಳಿಗೆ ಶಾಸಕ ಸಿ.ಸಿ. ಪಾಟೀಲ ಉಚಿತ ಪಠ್ಯ-ಪುಸ್ತಕ ವಿತರಿಸಿದರು.
ನರಗುಂದ: ಶಿಕ್ಷಕರ ಅವಿರತ ಪ್ರಯತ್ನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತ್ಯುತ್ತಮ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ, ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರು ಶ್ರಮಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಸಲಹೆ ನೀಡಿದರು.
ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1 ಹಾಗೂ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಶಾಲಾ ಪ್ರಾರಂಭೊತ್ಸವದಲ್ಲಿ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ school ಮಕ್ಕಳ ಸಂಖ್ಯೆ ಹೆಚ್ಚಿಸಲು ಶಿಕ್ಷಕರು ಮುಂದಾಗಬೇಕು ಎಂದರು.
ಬಿಇಒ ಎಂ.ಎಚ್. ಕಂಬಳಿ ಮಾತನಾಡಿ,ಪ್ರಸಕ್ತ ಶೈಕ್ಷಣಿಕ ವರ್ಷ ಸರ್ಕಾರಿ ಶಾಲೆಯಲ್ಲಿ ಶೇ. 15ರಷ್ಟು ಮಕ್ಕಳ ದಾಖಲೆ ಹೆಚ್ಚಿಸಲು ಶಿಕ್ಷಕರು ಶ್ರಮಪಡಬೇಕು. ದಾಖಲಾತಿ ಆಂದೋಲನ ಕಡ್ಡಾಯವಾಗಿ ಹಮ್ಮಿಕೊಂಡು ದಾಖಲಾತಿಯನ್ನು ಹೆಚ್ಚಿಸಬೇಕು ಎಂದು ಸೂಚಿಸಿದರು.
ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ಶಾಸಕ ಸಿ.ಸಿ. ಪಾಟೀಲ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ನೆಗಳೂರ, ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಶಿವಾನಂದ ಮುತವಾಡ, ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ಆರ್. ನಿಡಗುಂದಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಾರುತಿ ಅಸುಂಡಿ, ಬಸವರಾಜ ಮಳಗಿ, ಎಸ್.ಡಿ. ಇನಾಮದಾರ, ಎಂ.ಬಿ. ಮಲ್ಲಾಪುರ, ಎನ್.ಎಂ. ಬಾರ್ಖಿ, ಬಿ.ಎ. ಬೋಯಿಟೆ, ಎಸ್.ವೈ. ಸುರಕೋಡ, ಆರ್.ಕೆ. ಮುಧೋಳ, ಇತರರಿದ್ದರು.