ನರೇಗಲ್ಲನ ಬಸ್ ನಿಲ್ದಾಣದಲ್ಲಿ ಭಾನುವಾರ ಪಲ್ಸ್ ಪೋಲಿಯೋ (polio)ಲಸಿಕಾ ಕಾರ್ಯಕ್ರಮಕ್ಕೆ ಡಾ. ಕೆ.ಬಿ. ಧನ್ನೂರ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.  
ಗದಗ

polio ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಿ

ಮಂಜುನಾಥ ಕೆಂಪಸಣ್ಣವರ
ನರೇಗಲ್ಲ: ಪಲ್ಸ್ polio ಪೋಲಿಯೋ ಕಾರ್ಯಕ್ರಮವು ಭಾರತ ಸರ್ಕಾರವು ಪ್ರಾರಂಭಿಸಿದ ಅಭಿಯಾನವಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ವೈರಸ್ ವಿರುದ್ಧ ಲಸಿಕೆ ನೀಡುವುದರ ಮೂಲಕ ಪೋಲಿಯೋವನ್ನು ನಿರ್ಮೂಲನೆ ಮಾಡುವ ಗುರಿ ಹೊಂದಿದೆ ಎಂದು ರೋಟರಿ ಅಧ್ಯಕ್ಷ ಡಾ. ಕೆ.ಬಿ. ಧನ್ನೂರ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 5 ವರ್ಷದೊಳಗಿನ ಮಕ್ಕಳಿಗೆ ಪಾಲಕರು ತಪ್ಪದೆ ಪಲ್ಸ್ ಪೋಲಿಯೋ ಹನಿ ಹಾಕಿಸಬೇಕು ಎಂದರು.
ವೈದ್ಯಾಧಿಕಾರಿ ಎ.ಡಿ. ಸಾಮುದ್ರಿ ಮಾತನಾಡಿ, ಪೋಲಿಯೋ ಹನಿಗಳನ್ನು ಬೂತ್‌ಗಳು, ಆರೋಗ್ಯ ಕೇಂದ್ರಗಳು, ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ.
ಈ ಕಾರ್ಯಕ್ರಮವನ್ನು ಆರೋಗ್ಯ ಕಾರ್ಯಕರ್ತರು, ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಇತರ ಸ್ವಯಂಸೇವಕರು ನಡೆಸುತ್ತಾರೆ. ಅವರು ಲಸಿಕೆ ಹಾಕುವುದರ ಜೊತೆಗೆ ಪಾಲಕರಿಗೆ ಆರೋಗ್ಯ ಶಿಕ್ಷಣ ನೀಡುತ್ತಾರೆ. ಈ ಕಾರ್ಯಕ್ರಮವು ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಸಹಾಯ ಮಾಡಿದೆ ಎಂದರು.
ಪಪಂ ಮಾಜಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಜಾಲಿಹಾಳ, ಮುತ್ತಣ್ಣ ಮಣಿನಾಗರ ಸಬಿಯಾ ಶರಬತವಾಲ, ಸಂಗೀತ ಮುಚಖಂಡಿ, ಎಲ್.ಟಿ. ಹೊಸಮನಿ ಇತರರಿದ್ದರು.