ಮುಂಡರಗಿ ಪಟ್ಟಣದ ಕೆ.ಆರ್. ಬೆಲ್ಲದ ಕಾಲೇಜ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ನೌಕರರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು (sports)ಜ.ಅ.ವಿದ್ಯಾ ಸಮಿತಿಯ ಗೌರವ ಕಾರ್ಯದರ್ಶಿ ಆರ್.ಆರ್.ಹೆಗ್ಗಡಾಳ ಉದ್ಘಾಟಿಸಿದರು.  
ಗದಗ

sports ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ

ಮುಂಡರಗಿ: ಕ್ರೀಡೆಯಲ್ಲಿ sports ಸೋಲು ಮತ್ತು ಗೆಲುವು ಮುಖ್ಯವಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಷಯ ಎಂದು ನಾಡೋಜ ಡಾ.ಅನ್ನದಾನೀಶ್ವರ ಶಿವಯೋಗಿಗಳವರು ಹೇಳಿದರು.
ಪಟ್ಟಣದ ಕೆ.ಆರ್. ಬೆಲ್ಲದ ಕಾಲೇಜ್‌ನಲ್ಲಿ ಜ.ಅ. ವಿದ್ಯಾ ಸಮಿತಿಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಲೇಜ್ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ನೌಕರರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಒಂದು ಸಂಸ್ಕೃತ ಪಾಠ ಶಾಲೆಯಿಂದ ಪ್ರಾರಂಭವಾದ ಶ್ರೀ ಜ.ಅ.ವಿ.ಸಮಿತಿಯು ಇವತ್ತು 33 ಅಂಗ ಸಂಸ್ಥೆಗಳನ್ನು ಹೊಂದಿ ಬೆಳೆದು ನಿಂತಿದೆ. ನಾಡಿನ ಉದ್ದಗಲಕ್ಕೂ ಈ ವಿದ್ಯಾ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿದ್ದಾರೆ. ಶತಮಾನೋತ್ಸವ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅವಶ್ಯವಿದೆ ಎಂದರು.
ಕಾರ್ಯಕ್ರಮವನ್ನು ಜ.ಅ.ವಿದ್ಯಾ ಸಮಿತಿಯ ಗೌರವ ಕಾರ್ಯದರ್ಶಿ ಆರ್.ಆರ್. ಹೆಗ್ಗಡಾಳ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಪ್ರೊ.ಆರ್.ಎಲ್. ಪೊಲೀಸಪಾಟೀಲ ಮಾತನಾಡಿ, ಆಟಗಳು ಗೆಲುವಿಗಾಗಿ ಅಲ್ಲ. ಬಹುಮಾನಕ್ಕಾಗಿ ಅಲ್ಲ. ಆಟಗಳು ಸಾಮರಸ್ಯವನ್ನು ಬೆಳೆಸುವುದಕ್ಕಾಗಿ ಇರಬೇಕು ಎಂದರು.
ಸಮಿತಿಯ ಆಡಳಿತಾಧಿಕಾರಿ ಡಾ.ಬಿ.ಜಿ. ಜವಳಿ ಮಾತನಾಡಿ, ಜ. 17, 18 ರಂದು ಸಮಿತಿಯ ಶತಮಾನೋತ್ಸವದ ಕಾರ್ಯಕ್ರಮಗಳು ನಡೆಯುತ್ತವೆ. ಕಾರ್ಯಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು, ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು ಭಾಗವಹಿಸುತ್ತಿದ್ದು, ತಾವೆಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಾಗೇಶ ಹುಬ್ಬಳ್ಳಿ, ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ ಮಾತನಾಡಿದರು. ಬಹುಮಾನದ ಪ್ರಾಯೋಜಕರಾದ ಆರ್.ಎಲ್. ಪೋಲೀಸಪಾಟೀಲ, ಎ.ಡಿ.ಬಂಡಿ, ಗಿರೀಶ ಅಂಗಡಿ ಮತ್ತು ಕೊಟಕ್ ಮಹೀಂದ್ರಾ ಬ್ಯಾಂಕಿನ ಶಾಖಾ ವ್ಯವಸ್ಥಾಪಕಿ ಜ್ಯೋತಿಭಾ ಫರೀಟ್ ಅವರನ್ನು ಸನ್ಮಾನಿಸಲಾಯಿತು. ಪಂದ್ಯಾವಳಿಯಲ್ಲಿ ಒಟ್ಟು 11 ತಂಡಗಳು ಭಾಗವಹಿಸಿದ್ದವು.
ವಿ.ಎಫ್. ಗುಡದಪ್ಪನವರ, ಜಯಣ್ಣ ಗುಜ್ಜರ, ಡಾ.ಡಿ.ಸಿ. ಮಠ, ಮಂಜುನಾಥ ಇಟಗಿ, ವೀರೇಶ ಸಜ್ಜನರ, ಉಮೆಶ ಹಿರೇಮಠ, ಮಂಜುನಾಥ ಮುಧೋಳ, ಡಾ.ಸಂತೋಷ ಹಿರೇಮಠ, ಡಾ.ಮನೋಜ ಕೋರ್ಪಡೆ ಇತರರು ಇದ್ದರು. ಸಹಾಯಕ ಪ್ರಾಧ್ಯಾಪಕ ಡಾ.ಆರ್.ಎಚ್. ಜಂಗಣವಾರಿ ಕಾರ್ಯಕ್ರಮ ನಿರ್ವಹಿಸಿದರು.