ಜಿಲ್ಲೆ

ಗಜೇಂದ್ರಗಡ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ನರೇಗಲ್ಲ: ಗಜೇಂದ್ರಗಡ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.23, 24ರಂದು ಇಲ್ಲಿನ ಕೃಷ್ಣಾಜಿ ರಂಗರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ. ರೋಣ ಶಾಸಕ ಜಿ.ಎಸ್. ಪಾಟೀಲ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ್ ತಾಂಬೋಟಿ, ತಾಪಂ ಇಒ ಚಂದ್ರಶೇಖರ ಕಂದಕೂರ, ಪಪಂ ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೊರದಾನ್ಯಮಠ, ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತಪ್ಪ ನೂಲ್ಕಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ತಾಲೂಕಿನ ಕ್ರೀಡಾಪಟುಗಳು ಆನ್‌ಲೈನ್ ಮೂಲಕ ಅ.21ರ ಒಳಗಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.