ಶನಿವಾರಸಂತೆಯ ಗಣಪತಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಪ್ರಯುಕ್ತ ಹಣತೆ ಹಚ್ಚಿರುವುದು. 
ಜಿಲ್ಲೆ

ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ನಾಗೇಶ ಎಸ್

ಶನಿವಾರಸಂತೆ: ಪಟ್ಟಣದ ಮಧ್ಯಪೇಟೆಯಲ್ಲಿರುವ ಶ್ರೀ ಪಾರ್ವತಿ ಚಂದ್ರಮೌಳೇಶ್ವರ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ಕಾರ್ತಿಕ ಮಾಸ ಲಕ್ಷ ದೀಪೋತ್ಸವ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೇವಸ್ಥಾನವನ್ನು ವಿದ್ಯುತ್ ದೀಪದಿಂದ ಅಲಂಕರಿಸಲಾಗಿತ್ತು. ಸಾವಿರಾರು ಹಣತೆಗಳನ್ನು ಹಚ್ಚಲಾಗಿತ್ತು. ಅರ್ಚಕರು ವಿಶೇಷ ಪೂಜೆ ನೆರವೇರಿಸಿದರು. ಪಟ್ಟಣ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಭಕ್ತರು ಪಾಲ್ಗೊಂಡಿದ್ದರು.