ಗಂಡಸಿ: ಗಂಡಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದಾಸೇನಹಳ್ಳಿ ದಿನೇಶ್ ಅವಿರೋಧ ಆಯ್ಕೆಯಾಗಿದ್ದಾರೆ.ವಿಜಯಲಕ್ಷ್ಮೀ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ದಾಸೇನಹಳ್ಳಿ ದಿನೇಶ್ ಹೊರತುಪಡಿಸಿ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆ ಘೋಷಿಸಿದರು. ನಂತರ ಮಾತನಾಡಿದ ದಾಸೇನಹಳ್ಳಿ ದಿನೇಶ್, ಗ್ರಾಮದ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.