ತುಮಕೂರು: ಏನೋ ಮಾಡಲು ಹೋಗಿ ಇನ್ನೇನೋ ಮಾಡಿದ್ರೆ ಆಗೋದೆ ಬೇರೆ ಎಂಬ ಮಾತು ಜಿಲ್ಲಾ ಕಾಂಗ್ರೆಸ್ಗೆ ಸಂಬಂಧಸಿದ ಫ್ಲೆಕ್ಸ್ಗೆ ಅಕ್ಷರಶಃ ಅನ್ವಯಿಸುತ್ತೆ. ಎರಡು ದಿನದ ಹಿಂದೆ ನಗರದಾದ್ಯಂತ ಹಾಕಲಾಗಿದ್ದ ಪಕ್ಷದ ಮುಖಂಡರ ಭಾವಚಿತ್ರವುಳ್ಳ ಫ್ಲೆಕ್ಸ್ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.
ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರುಗಳಿಂದ ತುಂಬಿಹೋಗಿರುವ ಫ್ಲೆಕ್ಸ್ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕೆಲವರು ಗಾಂಧಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರ ಹುಡುಕಿಕೊಟ್ಟವರಿಗೆ ಬಹುಮಾನ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ. ಅಲ್ಲದೆ ಕಾಂಗ್ರೆಸ್ ನಡೆಯ ಬಗ್ಗೆ ತೀವ್ರ ವ್ಯಂಗ್ಯವಾಡಿರುವ ಟ್ರೋಲಿಗರು, ರಾಷ್ಟ್ರಪಿತ ಗಾಂಧೀಜಿ ಬಗ್ಗೆ ಉದ್ದುದ್ದ ಭಾಷಣ ಮಾಡುವ ಕಾಂಗ್ರೆಸ್ಸಿಗರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.