ಜಿಲ್ಲೆ

ಸ್ವಚ್ಛ ಭಾರತ ದ.ಕ. ಮುಂಚೂಣಿ

ಮಂಗಳೂರು: ದೇಶದಲ್ಲಿ ಗಾಂಧೀಜಿಯವರ ಸ್ವಚ್ಛ ಭಾರತ ಕಲ್ಪನೆಯ ಕನಸು ನನಸಾಗಿಸುವಲ್ಲಿ ದಕ್ಷಿಣ ಕನ್ನಡ ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಕೋವಿಡ್ ನಿಯಮ, ನಿರ್ಬಂಧ ಜಾರಿ ಹಿನ್ನೆಲೆಯಲ್ಲಿ ದಕಿಣ ಕನ್ನಡ ಜಿಲ್ಲಾಡಳಿತ ಮತ್ತು ಭಾರತ್ ಸೇವಾದಳ ಆಶ್ರಯದಲ್ಲಿ ಶುಕ್ರವಾರ ನಗರದ ಕುದ್ಮುಲ್ ರಂಗರಾವ್ ಪುರಭವನ ಸಮೀಪದ ಗಾಂಧಿ ಪ್ರತಿಮೆ ಎದುರು ಗಾಂಧಿ ಜಯಂತಿ ಸರಳ ಅಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಅರುಣಾಂಶುಗಿರಿ, ಎಸಿ ಮದನ್ ಮೋಹನ್, ಸ್ಮಾರ್ಟ್ ಸಿಟಿ ಎಂಡಿ ಮುಹಮ್ಮದ್ ನಝೀರ್, ತಹಸೀಲ್ದಾರ್ ಗುರುಪ್ರಸಾದ್, ಭಾರತ್ ಸೇವಾದಳದ ಕಾರ್ಯದರ್ಶಿ ಟಿ.ಕೆ.ಸುಧೀರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಭಾರತ್ ಸೇವಾದಳದ ಬಶೀರ್ ಬೈಕಂಪಾಡಿ, ಮಂಜೇಗೌಡ ಉಪಸ್ಥಿತರಿದ್ದರು.