ಜಿಲ್ಲೆ

ಅನ್ಯಾಯದ ವಿರುದ್ಧ ಏಕಾಂಗಿಯಾಗಿ ದನಿಯೆತ್ತಿದ ಗಾಂಧೀಜಿ

Uttara Kannada - Subash Hegde

ಕಾರವಾರ: ಮಹಾತ್ಮ ಗಾಂಧೀಜಿಯವರು ಬ್ರಿಟೀಷರ ವಿರುದ್ದ ಧೈರ್ಯವಾಗಿ ಎದುರು ನಿಂತು ಇಡೀ ಭಾರತವನ್ನು ಒಂದುಗೂಡಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಮುನ್ನಡೆಸಿದ್ದರು, ಅನ್ಯಾಯದ ವಿರುದ್ಧ ಏಕಾಂಗಿಯಾಗಿ ದನಿಯೆತ್ತುವ ಅವರ ಧೈರ್ಯದ ಗುಣ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.

ಅವರು ಗುರುವಾರ ನಗರಸಭೆಯ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ

ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಕಾರವಾರ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ

ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರಲ್ಲಿದ್ದ ಪ್ರಾಮಾಣಿಕತೆಯ ಗುಣವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಅಹಿಂಸೆಯ ಮೂಲಕ ಏನು ಬೇಕಾದರು ಸಾಧಿಸಬಹುದು ಎಂದು ಇಡೀ ಜಗತ್ತಿಗೆ ತಿಳಿಸಿದ ಮಹಾನ್ ಚೇತನ ಗಾಂಧೀಜಿ, ಅವರ ಅಹಿಂಸೆಯ

ತತ್ವದ ಪಾಲನೆ ಇಂದು ಇಡೀ ವಿಶ್ವಕ್ಕೆ ಅಗತ್ಯವಿದೆ, ಸರಳ ವ್ಯಕ್ತಿತ್ವ ಹೊಂದಿದ್ದ ಗಾಂಧೀಜಿ ಅವರ ಬಗ್ಗೆ ಪೋಷಕರು ತಮ್ಮ ಮಕ್ಕಳಿಗೆ

ತಿಳಿಸಬೇಕು, ಸಮಾಜದಲ್ಲಿ ಬದಲಾವಣೆ ಮಾಡಲು ದೊಡ್ಡ ಕೆಲಸಗಳನ್ನು ಮಾತ್ರ ಮಾಡಬೇಕಾದ ಅಗತ್ಯವಿಲ್ಲ ಬದಲಾಗಿ

ಸಮಾಜಮುಖಿಯಾದ ಸಣ್ಣ ಸಣ್ಣ ಕಾರ್ಯಗಳ ಮೂಲಕ ಕೂಡ ಉತ್ತಮ ಬದಲಾವಣೆ ತರಲು ಸಾಧ್ಯ ಎಂಬುದನ್ನು ಗಾಂಧೀಜಿ

ತಿಳಿಸಿದ್ದು, ಅವರ ತತ್ವ ಮತ್ತು ಸಂದೇಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದೀಲಿಷ್ ಶಶಿ ಮಾತನಾಡಿ, ಗಾಂಧೀಜಿ ಅವರು ನನ್ನ

ಜೀವನವೇ ನನ್ನ ಸಂದೇಶ ಎಂಬುದಕ್ಕೆ ಪೂರಕವಾಗಿ ಅವರ ತತ್ವಗಳನ್ನು ಜೀವನ ಪರ್ಯಾಂತ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಸರಳ

ವ್ಯಕ್ತಿತ್ವದ ನಾಯಕ. ದೇಶದ ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಎಲ್ಲಾ ಜಾತಿ ಧರ್ಮದವರನ್ನು ಒಗ್ಗೂಡಿಸಿ ಬ್ರಿಟಿಷರಿಂದ

ಸ್ವಾತಂತ್ರ್ಯೋ ತಂದುಕೊಟ್ಟರು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಲಿಪ್ ಎಂ. ಎನ್ ಮಾತನಾಡಿ, ಗಾಂಧೀಜಿ ಅವರು ರಾಜಕೀಯ, ಧಾರ್ಮಿಕ

ವಿಷಯಗಳು ಹಾಗೂ ಪರಿಸರದ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಅವರ ಅಚಾರ ವಿಚಾರಗಳು ಎಲ್ಲ ಕಾಲ ಘಟ್ಟಗಳಿಗೂ ಪ್ರಸ್ತುತ

ಎಂದರು.

ನಗರಸಭೆ ಅಧ್ಯಕ್ಷ ರವಿರಾಜ ಅಕೋಲೇಕರ ಮಾತನಾಡಿ, ಗಾಂಧೀಜಿ ಅವರ ಬಗ್ಗೆ ತಿಳಿಯಬೇಕಾದ ಸಾಕಷ್ಟು

ವಿಷಯಗಳಿದ್ದು, ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ಸತ್ಯ, ಅಹಿಂಸೆ ಹಾಗೂ ಆತ್ಮಬಲದ ಕುರಿತು ಪ್ರತಿಯೊಬ್ಬರೂ

ತಿಳಿಯಬೇಕಿರುವುದು ಬಹಳಷ್ಟು ಇದೆ . ಸತ್ಯ, ಅಹಿಂಸೆ ಮತ್ತು ಶಾಂತಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟ ಮಹಾನ್

ನಾಯಕ ಗಾಂಧೀಜಿ ಅವರು ಎಂದರು

ಗಾAಧೀಜಿ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದ ಅಂಕೋಲಾದ ನಿವೃತ್ತ ಪ್ರಾಚಾರ್ಯರು ಹಾಗೂ

ಸಾಹಿತಿಗಳಾದ ಮೋಹನ್ ಹಬ್ಬು , ಗಾಂಧೀಜಿ ಅವರು ಏರಿದ ಎತ್ತರಕ್ಕೆ ಯಾವ ನಾಯಕರೂ ಇದುವರೆಗೆ ಏರಿಲ್ಲ, ಏರಲೂ ಆಗುವುದಿಲ್ಲ,

ನನ್ನ ಜೀವನವೇ ನನ್ನ ಸಂದೇಶ ಎನ್ನುವ ಅರ್ಹತೆ ಇದ್ದ ಏಕೈಕ ವ್ಯಕ್ತಿ ಅವರು. ಪ್ರಪಂಚದ 175 ದೇಶಗಳು ಅಂಚೆ ಚೀಟಿ ಹೊರ ತಂದ,

ಮರಣೋತ್ತರ ಗೌರವವಾಗಿ ವಿಶ್ವ ಸಂಸ್ಥೆ ತನ್ನೆಲ್ಲಾ ದೇಶಗಳ ಧ್ವಜಗಳನ್ನು ಅರ್ಧಕ್ಕಿಳಿಸಿದ ಜಗತ್ತಿನ ಏಕೈಕ ನಾಯಕರಾಗಿದ್ದಾರೆ.

ಅಹಿಂಸಾ ತತ್ವವನ್ನು ಪಾಲಿಸಿದ ಗಾಂಧೀಜಿ ಯಾರನ್ನೂ ದ್ವೇಷಿಸಲಿಲ್ಲ, ಸ್ವಾವಲಂಬನೆಗೆ ಒತ್ತು ನೀಡಿದ್ದ ಅವರು ಒಬ್ಬ ಸಂತರಾಗಿದ್ದರು,

ಆದ್ಯಾತ್ಮಕ ಸಾಧಕರಾಗಿದ್ದರು ಎಂದರು.