ಕಡಬ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು.
ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಸತೀಶ್ ಭಟ್ ಮಾತನಾಡಿ, ಗಾಂಧೀಜಿ ಮತ್ತು ಶಾಸ್ತ್ರಿ ದೇಶ ಕಂಡ ಯುಗಪುರುಷರು. ಇಬ್ಬರೂ ಸ್ವಾತಂತ್ರೃಕ್ಕಾಗಿ ಹೋರಾಟ ಮಾಡಿ ದೇಶವನ್ನು ಮುನ್ನಡೆಸಿದವರು. ಪ್ರಬಲ ಇಚ್ಛಾಶಕ್ತಿಯ ಮೂಲಕ ಬಲಿಷ್ಠ ಬ್ರಿಟಿಷರನ್ನು ಮಣಿಸಿದವರು. ವಿದ್ಯಾರ್ಥಿಗಳು ಅವರ ಜೀವನದ ಕಥೆಯನ್ನ ಓದಿ ಪ್ರೇರಣೆ ಪಡೆದುಕೊಳ್ಳಬೇಕು ಎಂದರು.
ಮಹಾತ್ಮ ಗಾಂಧೀಜಿ, ಲಾಲ್ ಬಹಾದೂರ್ ಶಾಸ್ತ್ರಿ ಮತ್ತು ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಪುಷ್ಪಾರ್ಚನೆ ಮಾಡಿದರು. ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.