ಧಾರವಾಡ: ಜಿಲ್ಲಾಡಳಿತದಿಂದ ಅ. 2ರಂದು ಮಹಾತ್ಮಾ ಗಾಂಧಿ ಹಾಗೂ ಲಾಲ್‌ಬಹಾದ್ದೂರ ಶಾಸ್ತಿ ಜಯಂತಿ ಆಚರಣೆ ಸಂಬ0ಧ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಶುಕ್ರವಾರ ಜರುಗಿತು.
ಜಿಲ್ಲಾಡಳಿತ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗಾಂಽ ಶಾಂತಿ ಪ್ರತಿಷ್ಠಾನ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ 2ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅಂದು ಬೆಳಗ್ಗೆ 8.30 ಗಂಟೆಗೆ ಜಿಲ್ಲಾಡಳಿತದ ಆವರಣದಲ್ಲಿರುವ ಗಾಂಽ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. 9 ಗಂಟೆಗೆ ಆಲೂರು ವೆಂಕಟರಾವ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚರಕ ನೂಲುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಸ್. ಸುರೇಶ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಬಿ. ವಿನೋದಕುಮಾರ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮೀಪತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಶಿರಸ್ತೇದಾರ ಎಂ.ಜಿ. ಸೊಲಗಿ, ಇತರರಿದ್ದರು.