ಕೆ.ಆರ್.ಸಾಗರ; ಕೆ.ಆರ್.ಸಾಗರ ಗ್ರಾಮ ಪಂಚಾಯಿತಿ ಆವರಣದಲ್ಲಿ ಗಾಂಧೀಜಿ ಪುಣ್ಯ ಸ್ಮರಣೆ ಆಯೋಜಿಸಲಾಗಿತ್ತು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2 ನಿಮಿಷ ಮೌನಚಾರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ತಾಲೂಕು ಎನ್‌ಆರ್‌ಎಲ್‌ಎಂನ ಸಂಯೋಜಕಿ ಸುನಿತಾ, ಮಹಿಳೆಯರ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ತಡೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಿ.ಡಿ.ಒ. ಬಸವರಾಜು, ಕಾರ್ಯದರ್ಶಿ ರಘುಜಿ ಸೇರಿದಂತೆ ಗ್ರಾ.ಪಂ. ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘ, ಅಂಗನವಾಡಿ ಮತ್ತು ಆಶಾ ಕಾಯಕರ್ತೆಯರು ಭಾಗವಹಿಸಿದ್ದರು.