ಜಿಲ್ಲೆ

ವಸತಿ ಶಾಲೆಗೆ ಗಣೇಶ್ ಪ್ರಸಾದ್ ಭೂಮಿಪೂಜೆ

  • ಚಾಮರಾಜನಗರ : ತಾಲೂಕಿನ ಎಲ್ಲ ವಸತಿ ಶಾಲೆಗಳನ್ನೂ ಉತ್ತಮ ಪರಿಸರದಲ್ಲಿ ನಿರ್ಮಿಸಿ ಗ್ರಾಮಾಂತರ ಪ್ರದೇಶಗಳ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


ಸೋಮವಾರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಸಂಪೂರ್ಣಗೊಳಿಸಿದೆ. ತಾಂತ್ರಿಕ ಕಾರಣಗಳಿಂದ ಇನ್ನೂ ಕೆಲವು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸೇರಿಲ್ಲ. ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡುತ್ತಿದ್ದು ಎಲ್ಲ ಕಾಮಗಾರಿಗಳನ್ನೂ ಪೂರ್ಣಗೊಳಿಸಲಾಗುವುದು. ಸದ್ಯ ಬೇಸಿಗೆಯಿಂದ ಕುಡಿಯುವ ನೀರಿನ ಸಮಸ್ಯೆ ತೋರದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ. ಕೆರೆಗಳಿಗೂ ನದಿ ಮೂಲದಿಂದ ನೀರು ತುಂಬಿಸಲಾಗುವುದು ಎಂದು ಹೇಳಿದರು.


ಗ್ರಾಮಪಂಚಾಯಿತಿ ಅಧ್ಯಕ್ಷ ಚಿಕ್ಕರಾಚಶೆಟ್ಟಿ, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯ ಬಿ.ಎಸ್.ಮಲ್ಲು, ರತ್ನಮ್ಮ, ಕಮಲಮ್ಮ, ಎಪಿಎಂಸಿ ಅಧ್ಯಕ್ಷ ಬಸವರಾಜಪ್ಪ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಎಂಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿ.ಮಡಿವಾಳಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮುಖಂಡರಾದ ಕೆ.ನ್.ಮಾದಪ್ಪ, ಟಿ.ಪಿ.ನಾಗರಾಜು, ಕುಂದಕೆರೆ ರಾಜು ಸೇರಿದಂತೆ ಹಲವರು ಇದ್ದರು.