ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಮಾಳಮಡ್ಡಿಯ ವೀರ ಸಾವರಕರ ಗೆಳೆಯರ ಬಳಗದ ಶ್ರೀ ಗಜಾನನ ಉತ್ಸವ ಸಮಿತಿ ವತಿಯಿಂದ ರೈಲ್ವೆ ಸ್ಟೇಶನ್ ರಸ್ತೆಯಲ್ಲಿ ಸೆ. 7ರಿಂದ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಿದ್ದು, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸೆ. 7ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಗಣಪತಿ ಪ್ರತಿಷ್ಠಾಪನೆ ಮತ್ತು ಪೂಜೆ ನಡೆಯಲಿದೆ. ಸಂಜೆ 6.45ಕ್ಕೆ ಪ್ರಶಾಂತ ದೀಕ್ಷಿತ ಹಾಗೂ ತಂಡದಿಂದ ದಾಸವಾಣಿ ಸಂಗೀತ, ಸಂಜೆ 7.30ಕ್ಕೆ ಝೀ ಟಿವಿ ಹಾಸ್ಯ ಕಲಾವಿದ ರಾಘವೇಂದ್ರ ಆಚಾರ ಅವರಿಂದ ಹಾಸ್ಯ ಸಂಜೆ ಮತ್ತು ರಾತ್ರಿ 8 ಗಂಟೆಗೆ ಮಹಾಮಂಗಳಾರತಿ ಹಾಗೂ ಭಾರತ ಮಾತೆಯ ಪೂಜೆ ನೆರವೇರಲಿದೆ.
ಸೆ. 8ರಂದು ಬೆಳಗ್ಗೆ 11 ಗಂಟೆಗೆ ಗಣಪತಿ ಪೂಜೆ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 7 ಗಂಟೆಗೆ ಕಲಕೇರಿ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ಭಾರತ ಮಾತೆಯ ಪೂಜೆ ನಡೆಯಲಿದೆ.
ಸೆ. 9ರಂದು ಬೆಳಗ್ಗೆ 11 ಗಂಟೆಗೆ ಗಣಪತಿ ಪೂಜೆ, ಗಣಹೋಮ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಗಣಪತಿ ವಿಸರ್ಜನಾ ಕಾರ್ಯಕ್ರಮ ಆರಂಭವಾಗಲಿದ್ದು, ಮಾಳಮಡ್ಡಿ, ಎಮ್ಮಿಕೇರಿ, ಕೋರ್ಟ್ ವೃತ್ತ, ವನಿತಾ ಸೇವಾ ಸಮಾಜ, ಹೊಸಯಲ್ಲಾಪುರ ಮುಖ್ಯ ರಸ್ತೆ ಮಾರ್ಗವಾಗಿ ನುಚ್ಚಂಬ್ಲಿಭಾವಿಯಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.