ಜಿಲ್ಲೆ

ಬಸವಾಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ

ಲಲಾಟಾಕ್ಷ ಎಸ್

ಅರಕಲಗೂಡು: ತಾಲೂಕಿನ ಬಸವಾಪಟ್ಟಣದ ಉಪ್ಪಾರ ಬೀದಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮಹೋತ್ಸವ ಇತ್ತೀಚೆಗೆ ಸಂಭ್ರಮದಿಂದ ನೆರವೇರಿತು.


ಗಣೇಶ ಹಬ್ಬದ ದಿನ ಪ್ರತಿಷ್ಠಾಪಿಸಿದ್ದ ವಿನಾಯಕನ ಮೂರ್ತಿಗೆ ನಿತ್ಯ ಪೂಜೆ ಪುನಸ್ಕಾರಗಳು ನೆರವೇರಿದವು. ರಂಗೋಲಿ ಸ್ಪರ್ಧೆ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಲಂಕೃತ ವಾಹನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸಿ ಮೆರವಣಿಗೆ ಮಾಡಲಾಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬಳಿಕ ಊರ ಹೊರ ಭಾಗದ ಕಾಲುವೆಯಲ್ಲಿ ವಿಸರ್ಜಿಸಲಾಯಿತು.


ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳಾದ ಗ್ರಾಪಂ ಮಾಜಿ ಅಧ್ಯಕ್ಷ ಬಿ.ವಿ.ಮಹೇಂದ್ರ ಕುಮಾರ್, ತಾಪಂ ಮಾಜಿ ಸದಸ್ಯ ಬಿ.ಸಿ.ವೀರೇಶ್, ನಂಜುಂಡಣ್ಣ, ಹರೀಶ್, ಜಗದೀಶ್ ಅವರನ್ನು ಸನ್ಮಾನಿಸಲಾಯಿತು. ಗಣೇಶೋತ್ಸವ ಸಮಿತಿಯ ಹರೀಶ್, ನಟರಾಜು, ಬಿ.ಎಸ್. ಕಿರಣ್, ಅಭಿ, ಚರಣ್, ಮಹೇಶ್, ಗಿರೀಶ್, ಚೇತನ್, ಯಶ್ವಂತ್, ನಿಶ್ಚಯ್ ಇತರರಿದ್ದರು.