ಶಿವಮೊಗ್ಗ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸೆ.17ರಿಂದ ಅ.1ರವರೆಗೂ ಜಿಲ್ಲೆಯಲ್ಲಿ ಬೈಕ್ rallyಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ, ರಾಜಕೀಯ, ಪ್ರತಿಭಟನಾ ಮೆರವಣಿಗೆಗಳು, ಹಬ್ಬದ ಸಂದರ್ಭದಲ್ಲಿ ಯುವಕರು ಬೈಕ್ ರೈಲಿ ನಡೆಸುವಂತಿಲ್ಲ.
18ರಂದು ಮಾಂಸ ಮಾರಾಟ ನಿಷೇಧ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ.18ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ದಿನದ ಮಟ್ಟಿಗೆ ಮಾಂಸ ಮಾರಾಟಗಾರರು ಉದ್ದಿಮೆ ಸ್ಥಗಿತಗೊಳಿಸಿ ಸಹಕರಿಸುವಂತೆ ನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ತಿಳಿಸಿದ್ದಾರೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.