ಸಿಂಧನೂರು: ಸೆ.18ರಿಂದ ಗಣೇಶೋತ್ಸವ ಹಾಗೂ 28 ರಂದು ಈದ್ ಮಿಲಾದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಿ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಹೇಳಿದರು.
ನಗರದ ಶಹರ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶೋತ್ಸವ ಹಾಗೂ ಈದ್‌ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿಸಭೆಯಲ್ಲಿ ಮಂಗಳವಾರ ಸಂಜೆ ಮಾತನಾಡಿದರು. ಪರಿಸರ ಸ್ನೇಹಿಯಾಗಿ ಹಬ್ಬಗಳನ್ನು ಆಚರಿಸಬೇಕು. ಒಂದು ವೇಳೆ ಕಾನೂನು ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಹಬ್ಬಗಳು ಭಾವೈಕ್ಯತೆಯ ಸಂಕೇತಗಳಾಗಿವೆ. ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಆಧಾರಿಸಿವೆ. ಹೀಗಾಗಿ ಎಲ್ಲರನ್ನೂ ಒಂದಾಗಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದಿಂದ ಹಬ್ಬಗಳನ್ನು ಆಚರಿಸಿ ಮಾದರಿಯಾಗಬೇಕು ಎಂದರು.
ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಡಿಜೆ ಬಳಕೆ ನಿಷೇಧಿಸಲಾಗಿದೆ. ಡೊಳ್ಳುಕುಣಿತ, ವೀರಗಾಸೆ, ಕೋಲಾಟ ಮತ್ತಿತರ ವಾದ್ಯಮೇಳಗಳೊಂದಿಗೆ ಗಣೇಶೋತ್ಸವದ ಮೆರವಣಿಗೆ ಮಾಡಬೇಕು ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಮಾತನಾಡಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದಂತೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು. ನಗರದ ಹಿರೇಹಳ್ಳದಲ್ಲಿ 12 ಅಡಿ ಆಳದ ಎರಡು ಗುಂಡಿಗಳನ್ನು ತೆಗೆಯಲಾಗಿದೆ. ಅದರಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು. ಸೇತುವೆ ಮೇಲೆ ವಿದ್ಯುತ್ ದೀಪದ ವ್ಯವಸ್ಥೆ ಮಾಡಲಾಗುವುದು. ಪಿಒಪಿ ಗಣಪತಿ ಮೂರ್ತಿಗಳನ್ನು ವಶಪಡಿಸಿಕೊಳ್ಳಲು ನಗರಸಭೆಯಿಂದ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಮಣ್ಣಿನ ಗಣಪತಿ ಪ್ರತಿಷ್ಠಾಪನೆ ಮಾಡವುದು ಕಡ್ಡಾಯವಾಗಿದೆ. ಪ್ಲಾಸ್ಟಿಕ್ ಧ್ವಜ, ಬ್ಯಾನರ್, ಬಟ್ಟಿಂಗ್ಸ್ ಕಟ್ಟಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ತಹಸೀಲ್ದಾರ್ ಅರುಣ ದೇಸಾಯಿ, ಡಿವೈಎಸ್ಪಿ ಎಸ್.ಬಿ.ತಳವಾರ, ಸರ್ಕಲ್ ಇನ್ಸ್‌ಪೆಕ್ಟರ್ ರವಿಕುಮಾರ ಕಪ್ಪತ್‌ನವರ್, ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಡಿ.ದುರುಗಪ್ಪ, ಪ್ರಮುಖರಾದ ಎಚ್.ವೀರಭದ್ರಪ್ಪ ವಕೀಲ, ಎಂ.ಡಿ.ನದೀಮ್ ಮುಲ್ಲಾ, ಹುಸೇನಸಾಬ್