ಕಾರವಾರ: ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯ ಸ್ಥಳದಲ್ಲಿ ಎಲ್ಲ ನಿಯಮಗಳನ್ನು ಪಾಲಿಸಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ನಗರ ಸ್ಥಳೀಯ ಸಂಸ್ಥೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿತಯ ಅಧಿಕಾರಿಗಳಿಗೆ ಜಿಲ್ಲಾಧಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಗಣೇಶ ಚತುರ್ಥಿ ಸಂಬಂಧ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಪಿಓಪಿ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸಿರುವ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು ಎಂದರು. ಅಲ್ಲದೇ ಗಣೇಶೋತ್ಸವ ಸಮಯದಲ್ಲಿ ಪ್ಲಾಸ್ಟಿಕ್ ಬ್ಯಾನರ್, ಫ್ಲೆಕ್ಸ್ ಹಾಗೂ ಇತರ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ಪ್ರಸಾದ ರೂಪದಲ್ಲಿ ವಿತರಿಸುವ ಆಹಾರ ಪದಾರ್ಥಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು. ವಿದ್ಯುತ್ ಲೈನ್‌ಗಳ ಸಂಪರ್ಕದಿಂದ ತೊಂದರೆಯಾಗದAತೆ ಕ್ರಮ ವಹಿಸಬೇಖು. ಗುರುತಿಸಿದ ಸ್ಥಳದಲ್ಲಿ ಮಾತ್ರ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಇದುವರೆಗೆ 1467 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ ಎಂದು ವಿವರಿಸಿದರು. ಪೆಂಡಾಲ್‌ಗಳ ಬಳಿ ಅಗತ್ಯ ಸ್ವಯಂ ಸೇವಕರನ್ನು ನಿಯೋಜಿಸಬೇಕು. ಡಿಜೆ ಬಳಕೆ ಮಾಡುವಂತಿಲ್ಲ, ರಾತ್ರಿ 10 ರಿಂದ ಬೆಳಗ್ಗೆ 6 ರ ವರೆಗೆ ಧ್ವನಿವರ್ಧಕ ಬಳಸುವಂತಿಲ್ಲ, ರಾತ್ರಿ 8 ರಿಂದ 10 ರವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬಹುದು ಯಾವುದೇ ಹಂತದಲ್ಲೂ ಕಾನೂನು ಉಲ್ಲಂಘನೆ ಮತ್ತು ಶಾಂತಿ ಸುವ್ಯವಸ್ಥೆಗೆ ತೊಂದರೆ ಆಗದಂತೆ ಕ್ರಮ ವಹಿಸುವಂತೆ ಪೊಲೀಸ್ ಅಽಕಾರಿಗಳಿಗೆ ಸೂಚಿಸಿದರು.ಜಿಪಂ ಸಿಇಒ ದಿಲೀಶ್ ಶಶಿ, ಎಸ್‌ಪಿ ದೀಪನ್ ಎಂಎನ್‌ಜಿಲ್ಲಾ ಪರಿಸರ ಅಧಿಕಾರಿ ಸಂತೋಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಇದ್ದರು.