ಬೆಳೆ ವಿಮೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ಹುಲಿಹೈದರ್ ಹೋಬಳಿ ಘಟಕದ ಸದಸ್ಯರು ಗಂಗಾವತಿ ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲುಗೆ ಶನಿವಾರ ಮನವಿ ಸಲ್ಲಿಸಿದರು. 
ಜಿಲ್ಲೆ

ಬೆಳೆ ವಿಮೆ ಪರಿಹಾರ ನೀಡಲು ಒತ್ತಾಯಿಸಿ ರೈತಸಂಘದಿಂದ ಕೃಷಿ ಇಲಾಖೆ ಕಚೇರಿ ಎದುರು ಪ್ರತಿಭಟನೆ

ಗಂಗಾವತಿ: ಬೆಳೆ ವಿಮೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಹುಲಿಹೈದರ್ ಹೋಬಳಿ ಘಟಕದ ಸದಸ್ಯರು ನಗರದ ಕೃಷಿ ಇಲಾಖೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

2017ರಿಂದ ಬೆಳೆ ವಿಮೆ ಕಂತು ಪಾವತಿಸಿದ್ದರೂ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ಸಿಕ್ಕಿಲ್ಲ. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಮೂಲಕ ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದರೂ ವಿಮೆ ಕಂಪನಿಗಳು ಸ್ಪಂದಿಸುತ್ತಿಲ್ಲ. ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಲ್ಲಿ ಸ್ಪಷ್ಟತೆಯಿಲ್ಲ. ಮೂರು ವರ್ಷಗಳಿಂದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಯೂರಿಯಾ ಗೊಬ್ಬರವನ್ನು ಸಕಾಲಕ್ಕೆ ದೊರೆಯಬೇಕು. ರೈತರ ಬೇಡಿಕೆಯಂತೆ ಕೀಟನಾಶಕಗಳನ್ನು ಸರಬರಾಜು ಮಾಡುವಂತೆ ಹೋಬಳಿ ಘಟಕದ ಅಧ್ಯಕ್ಷ ಶರಣಪ್ಪ ಮರಿಯಪ್ಪ ಗದ್ದಿ ಒತ್ತಾಯಿಸಿದರು.