ಗಂಗಾವತಿ ಎಸ್‌ವಿಎಸ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ನಿಯಂತ್ರಣ ದಿನ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರಿ ಉದ್ಘಾಟಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ, ಕಾಲೇಜಿನ ಪ್ರಾಚಾರ್ಯ ಬಸವರಾಜ ಮೇಟಿ, ಆರೋಗ್ಯ ಕಾರ್ಯಕರ್ತ ಎಚ್.ಎಂ.ಗುರುರಾಜ್ ಇತರರಿದ್ದರು.  
ಜಿಲ್ಲೆ

ಜನಸಂಖ್ಯೆ ಸ್ಫೋಟದಿಂದ ಬಡತನ ಹೆಚ್ಚಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರಿ ಹೇಳಿಕೆ

ಕುರುವತ್ತಿ ಶ್ರೀಕಾಂತಪ್ಪ

ಗಂಗಾವತಿ: ಜನಸಂಖ್ಯೆ ನಿಯಂತ್ರಣ ಸಾಧಿಸಿದಾಗ ಜನರಿಗೆ ಸಕಾಲಕ್ಕೆ ಅಗತ್ಯ ಸೌಕರ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರಿ ಹೇಳಿದರು.

ನಗರದ ಎಸ್‌ವಿಎಸ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ನಿಯಂತ್ರಣ ದಿನಾಚರಣೆಯಲ್ಲಿ ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ ಸೌಲಭ್ಯದ ಕೊರತೆಯಾಗಲಿದೆ. ಸಕಾಲಕ್ಕೆ ಮೂಲ ಸೌಕರ್ಯ ಸಿಗಲ್ಲ. ಜನಸಂಖ್ಯೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಮಾತನಾಡಿ, ಜನಸಂಖ್ಯೆ ನಿಯಂತ್ರಣಕ್ಕೆ ಪೂರಕವಾದ ಯೋಜನೆಗಳನ್ನು ತಾಲೂಕಿನಲ್ಲಿ ಸಮರ್ಪಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಮತ್ತು ಭ್ರೂಣಲಿಂಗ ಪತ್ತೆ ಅಪರಾಧ ಕುರಿತು ಮಾಹಿತಿ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ಬಸವರಾಜ ಮೇಟಿ, ಆರೋಗ್ಯ ಕಾರ್ಯಕರ್ತರಾದ ಎಚ್.ಎಂ.ಗುರುರಾಜ್, ಸುರೇಶ ಸೇರಿ ಆಶಾ ಕಾರ್ಯಕರ್ತೆಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿದ್ದರು.