ಗಂಗಾವತಿ-ದರೋಜಿ ರೈಲು ಮಾರ್ಗದ ಕಾಮಗಾರಿಗಾಗಿ ರಾಜ್ಯದ ಪಾಲಿನ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯಿಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿಗೆ ಹೊಸಪೇಟೆಯಲ್ಲಿ ಭಾನುವಾರ ಮನವಿ ಸಲ್ಲಿಸಲಾಯಿತು. ಸಂಸ್ಥೆ ಜಿಲ್ಲಾಧ್ಯಕ್ಷ ಅಶೋಕಸ್ವಾಮಿ ಹೇರೂರು, ಸಂಸ್ಥೆ ಉಪಾಧ್ಯಕ್ಷ ಹಾಗೂ ಯಲಬುರ್ಗಾ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖಯ್ಯ ಹಿರೇಮಠ ಭಾನಾಪೂರ, ಗಂಗಾವತಿ ನಗರಸಭೆ ವಿಪಕ್ಷ ನಾಯಕ ಮನೋಹರಸ್ವಾಮಿ ಹಿರೇಮಠ ಇತರರಿದ್ದರು. 
ಜಿಲ್ಲೆ

ರಾಜ್ಯದ ಅನುದಾನ ಬಿಡುಗಡೆಗೊಳಿಸಿ

ಶ್ರೀನಾಥ

ಗಂಗಾವತಿ; ಗಂಗಾವತಿ-ದರೋಜಿ ರೈಲು ಮಾರ್ಗ ಕಾಮಗಾರಿಗಾಗಿ ರಾಜ್ಯದ ಪಾಲಿನ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆಯಿಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.

ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾದ ಸಂಸ್ಥೆಯ ಸದಸ್ಯರು, ಗಂಗಾವತಿ- ದರೋಜಿ ರೈಲ್ವೆ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆ ಜಿಲ್ಲಾಧ್ಯಕ್ಷ ಅಶೋಕ ಸ್ವಾಮಿ ಹೇರೂರು ಮಾತನಾಡಿ, ಉದ್ದೇಶಿತ ರೈಲ್ವೆ ಯೋಜನೆ ಹಲವು ವರ್ಷಗಳ ಕನಸಾಗಿದ್ದು, ಈಗಾಗಲೇ ಸರ್ವೇ ಪೂರ್ಣಗೊಂಡಿದೆ. ರಾಜ್ಯದ ಪಾಲಿನ ಅನುದಾನ ಬಿಡುಗಡೆಯಾದರೆ ಯೋಜನೆ ಶೀಘ್ರಗತಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದರು.

ಮನವಿ ಸ್ವೀಕರಿಸಿದ ಬಸವರಾಜ ರಾಯರಡ್ಡಿ, ಅನುದಾನ ಬಿಡುಗಡೆಗಾಗಿ ಸಿಎಂಗೆ ಪತ್ರ ಬರೆಯುವ ಬಗ್ಗೆ ಭರವಸೆ ನೀಡಿದರು.