ಗಂಗಾವತಿ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಬುಧವಾರ ಭೇಟಿ ನೀಡಿ ಪಥ್ಯಾಹಾರ ಸೇವಿಸಿ ಗುಣಮಟ್ಟ ಪರಿಶೀಲಿಸಿದರು. ಜಿಲ್ಲಾ ವೈದ್ಯಾಧಿಕಾರಿ ಡಾ.ಲಿಂಗರಾಜ್, ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಈಶ್ವರ ಸವಡಿ, ತಾಲೂಕು ವೈದ್ಯಾಧಿಕಾರಿ ಡಾ.ಗೌರಿ ಶಂಕರ ಚಿತ್ರಿಕಿ ಇತರರಿದ್ದರು.  
ಜಿಲ್ಲೆ

ಸರ್ಕಾರಿ ಆಸ್ಪತ್ರೆ ಗುಣಮಟ್ಟ ಪರಿಶೀಲನೆ

ಗಂಗಾವತಿ: ನಗರದ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಬುಧವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.

ವಿವಿಧ ಘಟಕಗಳ ರೋಗಿಗಳನ್ನು ವಿಚಾರಿಸಿ ಚಿಕಿತ್ಸೆ ಕುರಿತು ಅಭಿಪ್ರಾಯ ಪಡೆದರು. ಹೆರಿಗೆ ಮತ್ತು ಮಕ್ಕಳ ಚಿಕಿತ್ಸೆಯ ಉತ್ತಮ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಗಿಗಳಿಗೆ ವಿತರಿಸುತ್ತಿರುವ ಪಥ್ಯಾಹಾರ ಸೇವಿಸಿ ಗುಣಮಟ್ಟ ಪರೀಕ್ಷಿಸಿ, ಆಸ್ಪತ್ರೆಗೆ ಬೇಕಿರುವ ಸಲಕರಣೆಗಳು ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು. ನಿತ್ಯ ಬರುತ್ತಿರುವ ರೋಗಿಗಳ ಸಂಖ್ಯೆ ತಿಳಿದು ಅಚ್ಚರಿ ವ್ಯಕ್ತಪಡಿಸಿದರು.

ಜಿಲ್ಲಾ ವೈದ್ಯಾಧಿಕಾರಿ ಡಾ.ಲಿಂಗರಾಜ್, ತಾಲೂಕು ವೈದ್ಯಾಧಿಕಾರಿ ಡಾ.ಗೌರಿ ಶಂಕರ ಚಿತ್ರಿಕಿ, ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ, ಉಮೇಶ ಕಲ್ಮನಿ ಇತರರಿದ್ದರು.